ಭಯೋತ್ಪಾದಕ ದಾಳಿ; ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ| Modi

modi
Published on

terror attack| ಪಹಲ್ಗಾಮ್​ ​ ಪ್ರದೇಶದಲ್ಲಿ ನಡೆದ ಭಯೋತ್ಪಾದನೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್​ ರೂಪಿಸಲು ಸಜ್ಜಾಗಿದೆ. ಈ ಸಂಬಂಧ ಇಂದು (23) ಸಂಜೆ 6 ಗಂಟೆಗೆ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಪಹಲ್ಗಾಮ್‌ ದಾಳಿಗೆ ಪ್ರತಿ ದಾಳಿ ನಡೆಸುವ ಬಗ್ಗೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಈಗಾಗಲೇ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌ ನೇತೃತ್ವದಲ್ಲಿ ಹಿರಿಯ ಸೇನಾಧಿಕಾರಿಗಳು ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಜೊತೆ ಸಭೆ ನಡೆಲಾಗುತ್ತಿದೆ. ಮುಂದಿನ ಕ್ರಮಗಳ ಬಗ್ಗೆ ಪರಿಣಾಮಕಾರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

sha

ಬುಧವಾರ (23) ಸಂಜೆ 6 ಗಂಟೆಗೆ ಪ್ರಧಾನಿ ಮಂತ್ರಿ ನೇತೃತ್ವದಲ್ಲಿ ಸಭೆ ಮಾಡಿಲಿದ್ದು, ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿದಂತೆ ಪ್ರಮುಖ ಸಚಿವರ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ಸಭೆ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದ್ದು, ಎಲ್ಲರ ಗಮನ ಮೋದಿಯ ಸಭೆಯತ್ತ ಇದೆ.

ಪ್ರಧಾನ ಮಂತ್ರಿಗಳು ಸಿಸಿಎಸ್ ಮುಖ್ಯಸ್ಥರಾಗಿದ್ದಾರೆ. ಸಮಿತಿಯ ಇತರ ಪ್ರಮುಖ ಸದಸ್ಯರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದ್ದಾರೆ.

CCS ನ ಪ್ರಮುಖ ಕಾರ್ಯಗಳು ಯಾವುವು?

ರಕ್ಷಣಾ ನೀತಿಯಿಂದ ಹಿಡಿದು ರಾಷ್ಟ್ರೀಯ ಭದ್ರತೆ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯತಂತ್ರಗಳವರೆಗೆ, ಪ್ರಮುಖ ವಿಷಯಗಳ ಕುರಿತು ಭಾರತದ ಪ್ರತಿಕ್ರಿಯೆಯನ್ನು ರೂಪಿಸುವ ಜವಾಬ್ದಾರಿಯನ್ನು CCS ಹೊಂದಿದೆ. ಭಾರತದ ರಾಷ್ಟ್ರೀಯ ಭದ್ರತೆಯ ಕುರಿತಾದ ತುರ್ತು ಕಾಳಜಿಗಳ ಕುರಿತು CCS ಚರ್ಚಿಸುತ್ತದೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net