

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಅರ್ಜಿ ಆಹ್ವಾನಿಸಿದ್ದು, ಇದೇ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅ.23ರಿಂದ ನ.9ರವರೆಗೆ ಸಲ್ಲಿಸಬಹುದು. ಡಿ.7ರಂದು ಪರೀಕ್ಷೆ ನಡೆಯಲಿದ್ದು, ಡಿಸೆಂಬರ್ ಅಂತ್ಯಕ್ಕೆ ಲಿತಾಂಶ ನೀಡುವ ಗುರಿ ಹೊಂದಲಾಗಿದೆ.
ಶಿಕ್ಷಣ ಇಲಾಖೆಯು ಮುಂಬರುವ ಜನವರಿಯಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ನಡೆಸುವ ಉದ್ದೇಶ ಹೊಂದಲಾಗಿದೆ. ಈ ಸಂಬಂಧ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸುವ ಸಿದ್ಧತೆಯಲ್ಲಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಪರೀಕ್ಷೆಗೆ ಅರ್ಹತೆ ಪಡೆಯಲು ಟಿಇಟಿ ಕಡ್ಡಾಯವಾಗಿರುವ ಕಾರಣ ಟಿಇಟಿಯನ್ನು ಬೇಗ ಪೂರ್ಣಗೊಳಿಸಲಾಗುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಆ್ಲೈನ್‌ನಲ್ಲಿಯೇ ಪರೀಕ್ಷೆ
ಟಿಇಟಿಯನ್ನು ಈ ಬಾರಿ ಆನ್‌ಲೈನ್ ಮೂಲಕ ನಡೆಸುವ ಸಂಬಂಧ ಇಲಾಖೆಯು ಚಿಂತನೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸಭೆಗಳನ್ನು ಸಹ ನಡೆಸಿತ್ತು. ಆದರೆ, ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಹಾಗೂ ನೇಮಕಾತಿ ಪರೀಕ್ಷೆ ನಡೆಸುತ್ತಿರುವ ಕಾರಣ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಹೊಂದಲಾಗಿದೆ. ಆನ್‌ಲೈನ್‌ನಲ್ಲಿ ಪರೀಕ್ಷೆಯನ್ನು ಒಂದೇ ಹಂತದಲ್ಲಿ ನಡೆಸುವುದು ಕಷ್ಟವಾಗಬಹುದು. ಈ ಕಾರಣದಿಂದ ಆ್ಲೈನ್‌ನಲ್ಲಿಯೇ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸೂರಲ್ಕರ್ ತಿಳಿಸಿದ್ದಾರೆ.