

ತಮಿಳುನಾಡು: ಅತೀ ಹೆಚ್ಚಾಗಿ ಹಾಲಿವುಡ್ ಸಿನಿಮಾಗಳು ರಿಲೀಸ್ ಆಗುವ ಐಮ್ಯಾಕ್ಸ್ ಸ್ಕ್ರೀನ್ಸ್ಗಳಲ್ಲಿ ಇದೀಗ ಭಾರತೀಯ ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಈ ಪೈಕಿ ಪ್ರಭಾಸ್ ಅಭಿನಯದ ಸಲಾರ್ ತೆರೆ ಕಾಣಲಿದೆ ಎಂಬ ಮಾಹಿತಿ ಪ್ರಕಟವಾಗಿತ್ತು. ಅದರೊಟ್ಟಿಗೆ ಮತ್ತೊಬ್ಬ ನಟನ ಚಿತ್ರವು ಸಹ ಐಮ್ಯಾಕ್ಸ್ನಲ್ಲಿ ರಿಲೀಸ್ ಆಗಲಿದೆ ಎಂಬ ಸುದ್ದಿ ಕಾಲಿವುಡ್, ಟಾಲಿವುಡ್ ಅಂಗಳದಲ್ಲಿ ಈಗ ವ್ಯಾಪಕವಾಗಿ ಹರಿದಾಡುತ್ತಿದೆ.
ಸಿನಿಮಾ ನೋಡಲು ಬರುವ ಪ್ರೇಕ್ಷಕರಿಗೆ ವಿಶೇಷ ಅನುಭವ ನೀಡುವ ಐಮ್ಯಾಕ್ಸ್ ಪರದೆಯಲ್ಲಿ ಸಲಾರ್ ಜತೆಗೆ ತಮಿಳು ಚಿತ್ರರಂಗದ ಸ್ಟಾರ್ ನಟ, ದಳಪತಿ ವಿಜಯ್ ನಟನೆಯ 'ಲಿಯೋ' ಚಿತ್ರವು ಸಹ ಐಮ್ಯಾಕ್ಸ್ನಲ್ಲಿ ಬಿಡುಗಡೆಯಾಗಲಿದೆ ಎಂದು ಇತ್ತೀಚಿನ ಸಿನಿ ವರದಿ ತಿಳಿಸಿದೆ.
ಲಿಯೋ ಚಿತ್ರದ ತಯಾರಕರು ಐಮ್ಯಾಕ್ಸ್ನಲ್ಲಿ ಸಿನಿಮಾ ಬಿಡುಗಡೆಗೊಳಿಸಲು ಯೋಜಿಸುತ್ತಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದ್ರೆ, ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ದಳಪತಿ ವಿಜಯ್ ಮತ್ತು ನಿರ್ದೇಶಕ ಲೋಕೇಶ್ ಕನಕರಾಜ್ ಕಾಂಬಿನೇಷ್ನಲ್ಲಿ ರೂಪುಗೊಂಡಿರುವ ಚಿತ್ರವು ಅಕ್ಟೋಬರ್ 19, 2023 ರಂದು ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ.
ಲಿಯೋ ಸಿನಿಮಾದಲ್ಲಿ ವಿಜಯ್, ತ್ರಿಶಾ ಕೃಷ್ಣನ್ ನಾಯಕ ಮತ್ತು ನಾಯಕಿಯಾಗಿ ಕಾಣಿಸಿಕೊಂಡರೆ, ಸಂಜಯ್ ದತ್, ಮಿಸ್ಕಿನ್, ಗೌತಮ್ ವಾಸುದೇವ್ ಮೆನನ್, ಸಂತಿ ಮಾಯಾದೇವಿ, ಮ್ಯಾಥ್ಯೂ ಥಾಮಸ್, ಮನ್ಸೂರ್ ಅಲಿ ಖಾನ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಅಡಿಯಲ್ಲಿ ಸಿನಿಮಾ ನಿರ್ಮಾಣಗೊಂಡಿದ್ದು, ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಅವರ ಸಂಗೀತವಿದೆ,(ಏಜೆನ್ಸೀಸ್).