ಹೋರಾಟನಿರತ ರೈತರತ್ತ ವಾಲಿದ ಕೇಂದ್ರ ಸರ್ಕಾರ! ನಾಲ್ಕರಲ್ಲಿ ಎರಡು ಬೇಡಿಕೆಗೆ ಒಪ್ಪಿಗೆ

farmer
Published on

ನವದೆಹಲಿ: ಕೃಷಿ ಕಾಯ್ದೆಯ ಬಗ್ಗೆ ದೇಶಾದ್ಯಂತ ರೈತಾಕ್ರೋಶ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ರೈತರೊಂದಿಗೆ ಸಭೆ ನಡೆಸಿದೆ. ಏಳನೇ ಸುತ್ತಿನ ಸಭೆಯಲ್ಲಿ ರೈತರು ನಾಲ್ಕು ಬೇಡಿಕೆಗಳನ್ನು ಇಟ್ಟಿದ್ದು, ಅದರಲ್ಲಿ ಎರಡು ಬೇಡಿಕೆಗಳಿಗೆ ಕೇಂದ್ರ ಒಪ್ಪಿಗೆ ನೀಡಿದೆ. ಜನವರಿ 4ರಂದು ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ವಾಣಿಜ್ಯ ರಾಜ್ಯ ಸಚಿವ ಸೋಮ್ ಪ್ರಕಾಶ್ ಅವರು 41 ರೈತ ಸಂಘಗಳ ಪ್ರತಿನಿಧಿಗಳೊಂದಿಗೆ ಇಂದು ಮಾತುಕತೆ ನಡೆಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಸಲಾಗಿದೆ. ಮಾತುಕತೆಯಲ್ಲಿ ರೈತರು ನಾಲ್ಕು ಪ್ರಸ್ತಾಪಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಅದರಲ್ಲಿ ಎರಡಕ್ಕೆ ಒಪ್ಪಿಗೆ ನೀಡಲಾಗಿದೆ. ಕಾಯ್ದೆಗಳನ್ನು ಹಿಂಪಡೆಯುವ ಬಗ್ಗೆ ಮತ್ತು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಜನವರಿ 4ರಂದು ಸಭೆ ನಡೆಸಿ ಚರ್ಚಿಸಲಾಗುವುದು ಎನ್ನಲಾಗಿದೆ.

ಇಂದಿನ ಸಂಭಾಷಣೆ ಚೆನ್ನಾಗಿತ್ತು ಉತ್ತಮವಾಗಿತ್ತು. ಮುಂದಿನ ಸಂವಾದ ಜನವರಿ 4 ರಂದು ನಡೆಯಲಿದ್ದು, ಅಲ್ಲಿಯವರೆಗೆ ರೈತರ ಶಾಂತಿಯುತವಾಗಿ ಹೋರಾಟ ಮುಂದುವರಿಸಲಿದ್ದಾರೆ ಎಂದು ರೈತ ಮುಖಂಡ ರಾಕೇಶ್ ಟಿಕೈಟ್ ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net