

ನವದೆಹಲಿ: ಸತತ ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಅರವಿಂದ್ ಕೇಜ್ರಿವಾಲ್ ಅವರು ನಗರದಲ್ಲಿ ಬಸ್ಸುಗಳ ಕೊರತೆಯನ್ನು ಶೀಘ್ರವೇ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
ಕಳೆದ 10 ವರ್ಷಗಳ ಅವಧಿಯಲ್ಲಿ ನಗರದಲ್ಲಿ ಸಂಚರಿಸುವ ಬಸ್ಗಳ ಸಂಖ್ಯೆ 6000ಕ್ಕೆ ಏರಿದೆ. ಆದರೂ ಇನ್ನೂ ಕೊರತೆ ಇದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.
ಅದಕ್ಕೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ ಅರವಿಂದ್ ಕೇಜ್ರಿವಾಲ್ ಅವರು, ನಾನು ದೆಹಲಿ ನಿವಾಸಿಗಳಿಗೆ ಭರವಸೆ ನೀಡುತ್ತೇನೆ. ಅತಿ ಶೀಘ್ರದಲ್ಲಿಯೇ ನಗರದಲ್ಲಿ ಬಸ್ ಸಂಚಾರ ಪ್ರಮಾಣ ಜಾಸ್ತಿಯಾಗಲಿದೆ. ಬಸ್ಗಳಿಗೆ ಕೊರತೆಯಾಗಲು ಬಿಡುವುದಿಲ್ಲ ಎಂದಿದ್ದಾರೆ.
ದೆಹಲಿಯಲ್ಲಿ 11,000ಕ್ಕೂ ಹೆಚ್ಚು ಬಸ್ಗಳು ಸಂಚರಿಸುವ ವ್ಯವಸ್ಥೆ ಮಾಡುತ್ತೇವೆ ಹಾಗೂ ದೆಹಲಿ ಮೆಟ್ರೋ ಜಾಲವನ್ನು 500 ಕಿ.ಮೀ.ಗೂ ಜಾಸ್ತಿ ವಿಸ್ತರಣೆ ಮಾಡುವುದಾಗಿ ವಿಧಾನಸಭಾ ಚುನಾವಣೆ ವೇಳೆ ಆಮ್ ಆದ್ಮಿ ಪಕ್ಷ ಭರವಸೆ ನೀಡಿತ್ತು.(ಪಿಟಿಐ)