

ಮೈಸೂರು: ವರ್ಷದ ಹಿಂದೆ ಅಪ್ರಾಪ್ತೆ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ್ದ ಆರೋಪಿಗೆ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.1 ವಿಶೇಷ ನ್ಯಾಯಾಲಯ 30 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.
ಜಿಲ್ಲೆಯ ಬನ್ನೂರು ಸಮೀಪದ ಗ್ರಾಮ ಒಂದರ ಸುರೇಶ್ ಶಿಕ್ಷಗೆ ಒಳಗಾದವನು.
ಬನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಪ್ರಕರಣದ ತನಿಖಾಧಿಕಾರಿಯಾಗಿದ್ದ ಟಿ.ಎಸ್.ಲೋಲಾಕ್ಷಿ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಆನಂದ್ ಪಿ.ಹೂಗಾಡೆ ಅವರು ಗುರುವಾರ ಅಪರಾಧಿಗೆ 30 ವರ್ಷ ಕಠಿಣ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ಪರಿಹಾರದ ರೂಪದಲ್ಲಿ ನೊಂದ ಬಾಲಕಿಗೆ ನೀಡಬೇಕು ತೀರ್ಪು ಪ್ರಕಟಿಸಿದ್ದಾರೆ. ಅಲ್ಲದೆ ಬಾಲಕಿಯು ಸರ್ಕಾರದಿಂದ ಪರಿಹಾರ ರೂಪದಲ್ಲಿ 6 ಲಕ್ಷ ರೂ. ಪಡೆಯಲು ಅರ್ಹಳು ಎಂದು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.