ಜೆಡಿಎಸ್, ಬಿಜೆಪಿ ಮುಖಂಡರ ಆರೋಪ ಸತ್ಯಕ್ಕೆ ದೂರ

h m sathish
Published on

ಕೊಪ್ಪ: ಶಾಸಕ ರಾಜೇಗೌಡರು ಶೃಂಗೇರಿಕ್ಷೇತ್ರ ವ್ಯಾಪ್ತಿಯ ಹಿಂದುಳಿದ ವರ್ಗಗಳ ವಿವಿಧ ಸಮುದಾಯದ ಭವನಗಳಿಗೆ 7.75 ಕೋಟಿ ರೂ.ವಿಶೇಷ ಅನುದಾನ ಬಿಡುಗಡೆ ಮಾಡಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್.ಎಂ.ಸತೀಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಶಾಸಕ ಜೀವರಾಜ್ ಹಾಗೂ ಜೆಡಿಎಸ್ ಮುಖಂಡರು ಶೃಂಗೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಡೆಗಣಿಸಲ್ಪಟ್ಟಿದೆ ಎಂಬ ಹೇಳಿಕೆ ಸತ್ಯಕ್ಕೆ ದೂರ. ಬಾಳೆಹೊನ್ನೂರು ಪಟ್ಟಣ ಇಡೀ ಕ್ಷೇತ್ರದ ಅಭಿವೃದ್ಧಿಗೆ ಸಾಕ್ಷಿಯಾಗಿದೆ. ಪ್ರಸ್ತುತ ಹೈಟೆಕ್ ಬಸ್‌ನಿಲ್ದಾಣ ನಿರ್ಮಾಣವಾಗಿದೆ. ಜೀವರಾಜ್ ಅವಧಿಯಲ್ಲಿ ಕೊಪ್ಪದ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲ ಹುದ್ದೆಗಳು ಖಾಲಿ ಇದ್ದವು. ಈಗ ಎಲ್ಲ ಹುದ್ದೆಗಳು ಭರ್ತಿಯಾಗಿವೆ. ವಿರೋಧಿಗಳಿಗೆ ಅಭಿವೃದ್ಧಿಯೇ ನಮ್ಮ ಉತ್ತರ ಎಂದರು.

ಸಮುದಾಯ ಭವನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದ್ದಾರೆ. ಕ್ಷೇತ್ರದ ಶಾಸಕ ರಾಜೇಗೌಡ ಅವರು ಭ್ರಷ್ಟಾಚಾರ ರಹಿತವಾಗಿ ಅಭಿವೃದ್ಧಿ ಕಾಮಗಾರಿ ನಡೆಸುತ್ತಿದ್ದಾರೆ. ಅನುದಾನ ಬಿಡುಗಡೆ ಮಾಡಿಸುವಲ್ಲಿ ಶ್ರಮಿಸಿದ್ದಾರೆ ಎಂದು ತಿಳಿಸಿದರು. ತಾಲೂಕು ಕಾಂಗ್ರೆಸ್‌ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸತೀಶ್ ಅಬ್ಬಿಗದ್ದೆ, ಹರಂದೂರು ಗ್ರಾಪಂ ಸದಸ್ಯ ಆನಂದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net