ಮಳವಳ್ಳಿಯಲ್ಲಿ ಸಂವಿಧಾನ ಶಿಲ್ಪಿಯ ಸ್ಮರಣೆ

14 mlv 6
ಮಳವಳ್ಳಿ ಪ್ರವಾಸಿ ಮಂದಿರದ ಬಳಿ ಇರುವ ಅಂಬೇಡ್ಕರ್ ಅವರ ಪತ್ಥಳಿಗೆ ಸೋಮವಾರ ತಾಲೂಕು ಆಡಳಿತದ ವತಿಯಿಂದ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು. ತಹಸೀಲ್ದಾರ್ ಡಾ.ಲೋಕೇಶ್, ತಾಪಂ ಇಒ ಶ್ರೀನಿವಾಸ್, ಬಿಇಒ ಉಮಾ, ಸಮಾಜ ಕಲ್ಯಾಣಾಧಿಕಾರಿ ಸಂತೋಷ್ , ಡಿವೈಎಸ್ಪಿ ಕೃಷ್ಣಪ್ಪ, ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸಂಜಯ್ ಇದ್ದರು.
Published on

ಮಳವಳ್ಳಿ: ಪಟ್ಟಣದ ತಾಲೂಕು ಆಡಳಿತ ಸೇರಿದಂತೆ ತಾಲೂಕಿನಲ್ಲೆಡೆ ಸೋಮವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದ ವೃತ್ತದ ಬದಿಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ತಹಸೀಲ್ದಾರ್ ಡಾ.ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬಾಬಾ ಸಾಹೇಬರ ಸ್ಮರಿಸಲಾಯಿತು. ತಾಪಂ ಇಒ ಶ್ರೀನಿವಾಸ್ , ಬಿಇಒ ಉಮಾ, ಸಮಾಜ ಕಲ್ಯಾಣಾಧಿಕಾರಿ ಸಂತೋಷ್, ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸಂಜಯ್ ಇತರರಿದ್ದರು.

ಸಂಜೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಆಗಮಿಸಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದ ನಂತರ ತಾಲೂಕು ಪಂಚಾಯಿತಿ ಬಳಿ ಬೆಳ್ಳಿ ಸಾರೋಟಿನಲ್ಲಿ ಇರಿಸಲಾಗಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿವಿಧ ಭಾಷೆ ಹಾಗೂ ಸರ್ವಧರ್ಮವನ್ನು ಒಳಗೊಂಡಿರುವ ಭಾರತ ದೇಶಕ್ಕೆ ಇಡೀ ವಿಶ್ವವೇ ಮೆಚ್ಚುವಂತಹ ಸಂವಿಧಾನವನ್ನು ನೀಡುವ ಮೂಲಕ ಅಂಬೇಡ್ಕರ್ ಅವರು ವಿಶ್ವ ಮಾನವ ಎನಿಸಿಕೊಂಡಿದ್ದಾರೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ದೊಡ್ಡಯ್ಯ, ಮನ್‌ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಅಂಬರೀಷ್, ಮುಖಂಡರಾದ ವಕೀಲ ಜಗದೀಶ್, ಚೇತನ್ ನಾಯಕ್, ದಿಲೀಪ್‌ಕುಮಾರ್, ದ್ಯಾಪೇಗೌಡ, ನಂಜುಂಡಸ್ವಾಮಿ, ಶಿವಮಾದೇಗೌಡ, ರವಿ, ಪೂರಿಗಾಲಿ ಜಯರಾಜು, ಪ್ರಭುಸ್ವಾಮಿ, ಸಂತೋಷ್ ಸೇರಿದಂತೆ ಇತರರಿದ್ದರು.

ವಿವಿಧೆಡೆ ಜಯಂತಿ ಆಚರಣೆ: ಪಟ್ಟಣದ ಪುರಸಭೆ, ತಾಲೂಕು ಪಂಚಾಯಿತಿ, ಸೆಸ್ಕ್ ಕಚೇರಿಗಳಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಪ್ರಮುಖ ರಸ್ತೆಬದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿ ಮಜ್ಜಿಗೆ, ಪಾನಕ ಹಾಗೂ ಸಿಹಿ ವಿತರಣೆ ಮಾಡಿದರು. ತಾಲೂಕಿನ ಗ್ರಾಮಗಳಲ್ಲಿ ವಿದ್ಯುತ್ ದೀಪಾಲಂಕಾರ, ಅಂಬೇಡ್ಕರ್ ಭಾವಚಿತ್ರಗಳಿಗೆ ಪೂಜೆ, ಅನ್ನಸಂತರ್ಪಣೆ, ಮೆರವಣಿಗೆಗಳನ್ನು ನಡಸುವ ಮೂಲಕ ಬಾಬಸಾಹೇಬರ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net