

ಬೆಂಗಳೂರು: ಅಪಾಯಕಾರಿಯಾದ ವ್ಹೀಲಿಂಗ್ ಮಾಡುತ್ತಿದ್ದ ಸವಾರನನ್ನು ಸದಾಶಿವನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಾಲಹಳ್ಳಿ ಕುವೆಂಪುನಗರ ೧ನೇ ಹಂತದ ನಿವಾಸಿ ರಾಕೇಶ್(೧೯) ಬಂಧಿತ ಸವಾರ.
ಗುರುವಾರ ಮಧ್ಯಾಹ್ನ ೧.೩೦ರ ಸುಮಾರಿಗೆ ನ್ಯೂ ಬಿಇಎಲ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ. ಹೆಲ್ಮೆಟ್ ಧರಿಸದೆ ಅತಿವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿ ವ್ಹೀಲಿಂಗ್ ಸಾಹಸದಲ್ಲಿ ತೊಡಗಿದ್ದ. ಇದನ್ನು ಗಮನಿಸಿದ ಸಂಚಾರ ಪೊಲೀಸರು ತಕ್ಷಣ ಎಚ್ಚೆತ್ತುಕೊಂಡು ದ್ವಿಚಕ್ರ ವಾಹನವನ್ನು ತಡೆದು ಸವಾರ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.