ಯುವತಿಗೆ ಕಿರುಕುಳ ನೀಡಿದ್ದ ಆರೋಪಿಯ ಸೆರೆ

Arrest Kaidhi
Published on

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಯುವತಿಯನ್ನು ನಡು ರಸ್ತೆಯಲ್ಲಿ ಅಡ್ಡಗಟ್ಟಿ ಕಿರುಕುಳ ನೀಡಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ಬಿನ್ನಿಪೇಟೆ ನಿವಾಸಿ ಹರೀಶ್(೨೮) ಬಂಧಿತ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ, ಎರಡು ತಿಂಗಳ ಹಿಂದೆಯಷ್ಟೇ ಕೆಲಸ ಬಿಟ್ಟಿದ್ದ. ಕನಕಪುರ ಮುಖ್ಯರಸ್ತೆ ಸಮೀಪದ ನಿವಾಸಿ ಯುವತಿ, ಕೂಡ್ಲು ಗೇಟ್ ಬಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ನ. ೬ರಂದು ರಾತ್ರಿ ೧೦.೪೦ ಸುಮಾರಿಗೆ ಯುವತಿ ಕೆಲಸ ಮುಗಿಸಿ ತಮ್ಮ ದ್ವಿಚಕ್ರ ವಾಹನದಲ್ಲಿ ಸೌತ್ ಎಂಡ್ ಸರ್ಕಲ್ ಮಾರ್ಗವಾಗಿ ಹೋಗುತ್ತಿದ್ದರು. ಆಗ ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಎದುರಿನ ರಸ್ತೆಯಲ್ಲಿ ದ್ವಿಚಕ್ರ ವಾಹನ ಅಡ್ಡಗಟ್ಟಿದ್ದ ಆರೋಪಿ, ಆಕೆಯ ಬಟ್ಟೆ ಹಿಡಿದು ಎಳೆದಾಡಿ, ಅವಾಚ್ಯಶಬ್ಧಗಳಿಂದ ನಿಂದಿಸಿ ಪರಾರಿಯಾಗಿದ್ದ. ಈ ಸಂಬಂದ ಯುವತಿ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net