ನಟಿ ರಾಗಿಣಿ ವಿರುದ್ಧದ ಪ್ರಕರಣ ರದ್ದು

highcourt
Published on

ಬೆಂಗಳೂರು: ಡ್ರಗ್ಸ್ ಮಾಫಿಯಾ ಆರೋಪದಲ್ಲಿ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಸಾಕ್ಷಾೃಧಾರ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ರದ್ದುಗೊಳಿಸಿದೆ.

ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ರಾಗಿಣಿ ಮತ್ತು ಪ್ರಶಾಂತ್ ರಂಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ಪೀಠ ಈ ಆದೇಶ ನೀಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ಸಹ ಆರೋಪಿಗಳ ಹೇಳಿಕೆ ಮತ್ತು ಆರೋಪ ಪಟ್ಟಿಯಲ್ಲಿನ ಸಾಕ್ಷಿಗಳನ್ನು ಹೊರತುಪಡಿಸಿ ಅರ್ಜಿದಾರರ ವಿರುದ್ಧ ಆರೋಪ ಸಾಬೀತು ಪಡಿಸಲು ಸೂಕ್ತ ಸಾಕ್ಷಾೃಧಾರ ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಲವಾಗಿದೆ.

ಹೀಗಾಗಿ ಅರ್ಜಿದಾರರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗುತ್ತದೆ. ಹಾಗಾಗಿ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ಹೇಳಿದೆ. ಕಳೆದ ಜೂನ್‌ನಲ್ಲಿ ಚಿಪ್ಪಿ, ಸಂಜನಾ ಗಲ್ರಾನಿ ಮತ್ತು ಆದಿತ್ಯ ಮೋಹನ್ ಅಗರ್ವಾಲ್ ವಿರುದ್ಧದ ಪ್ರಕರಣವನ್ನೂ ಹೈಕೋರ್ಟ್ ರದ್ದುಪಡಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net