ತಲೆಮರೆಸಿಕೊಂಡಿದ್ದ ಆರೋಪಿ ವಿರುದ್ಧದ ಕೇಸ್ ರದ್ದು

highcourt
Published on

ಬೆಂಗಳೂರು: ಕೊಲೆ ಯತ್ನ ಪ್ರಕರಣದಲ್ಲಿ ಸಹ ಆರೋಪಿಗಳನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೌಡೂರು ನಿವಾಸಿ ವಿಶ್ವನಾಥ್ ಕೊರಗ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿದಾರರು ಪ್ರಕರಣದ ಹತ್ತನೆ ಆರೋಪಿ. ಆದರೆ ಇತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ವಿಚಾರಣೆಗೊಳಪಡಿಸಿದಾಗ ಅವರ ವಿರುದ್ಧ ಅಪರಾಧಗಳನು ಸಾಭೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಲವಾಗಿದ್ದು, ಈ ಹಿನ್ನೆಲೆ ಆರೋಪಿಗಳನ್ನು ಖುಲಾಸೆಗೊಳಿಸಲಾಯಿತು ಎಂಬ ಅಂಶವನ್ನು ನ್ಯಾಯಪೀಠ ಗಮನಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net