

ಬೆಂಗಳೂರು: ಹೈ ಕೋರ್ಟ್ ವಕೀಲೆ ಹಾಗೂ ಕೆಎಎಸ್ ಅಧಿಕಾರಿ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣ ಪೊಲೀಸರಿಗೆ ಹಲವು ಅನುಮಾನ ಮೂಡಿಸಿದೆ.
ಪೊಲೀಸರು ಮೃತ ಚೈತ್ರಾವತಿ ಬಗ್ಗೆ ವಿಚಾರಿಸಿದರೆ ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಮಹಿಳೆ ಅಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಸಾಕಷ್ಟು ಚೈತ್ರ ಸಾಕಷ್ಟು ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದರು. ತಮ್ಮ ವೃತ್ತಿ ಅಲ್ಲದೇ ಮಾಡೆಲಿಂಗ್ ಮತ್ತು ಸ್ಪೋಟ್ಸ್‌ನಲ್ಲೂ ಆ್ಯಕ್ಟೀವ್ ಆಗಿ ಇದ್ದರು. ಆದರೆ ಶನಿವಾರ ಬೆಳಗ್ಗೆ ಇದ್ದಕ್ಕಿದ್ದಂತೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಮೃತದೇಹವನ್ನು ಮರಣೊತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಸಾವಿನ ರಹಸ್ಯ ಬಯಲಾಗುವ ಸಾಧ್ಯತೆ ಇದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಂಜಯ್‌ನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.