ಕೇಂದ್ರದ ಪ್ಯಾಕೇಜ್ ಎಲ್ಲ ವರ್ಗದವರಿಗೂ ಸಹಕಾರಿ

20200608_131204
Published on

ಎಚ್.ಡಿ.ಕೋಟೆ: ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಸಲುವಾಗಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ.ಪ್ಯಾಕೇಜ್ ಘೋಷಣೆ ಮಾಡಿರುವುದು ಎಲ್ಲ ವರ್ಗದ ಜನರಿಗೆ ಸಹಕಾರಿಯಾಗಲಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಗುರುಸ್ವಾಮಿ ತಿಳಿಸಿದರು.

ಮೋದಿ ಅವರ ಆಡಳಿತವನ್ನು ಮೆಚ್ಚಿ ದೇಶದ ಜನರು ಎರಡನೇ ಅವಧಿಗೆ ಅಧಿಕಾರ ನೀಡಿದರು. ಅದಕ್ಕಾಗಿ ಹಲವಾರು ಮಹತ್ವ ಪೂರ್ಣ ಯೋಜನೆಗಳನ್ನು ಮೋದಿ ಜಾರಿಗೆ ತಂದರು. ಅಲ್ಲದೆ ಕರೊನಾ ತಡೆಗಟ್ಟಲು ದೇಶದಲ್ಲಿ ತೆಗೆದುಕೊಂಡ ಕ್ರಮಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

370ನೇ ವಿಧಿ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ, ತ್ರಿವಳಿ ತಲಾಕ್ ರದ್ದು ಮತ್ತು ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಕೈಗೊಂಡ ಕ್ರಮಗಳು ಜನರ ಮನಸ್ಸನ್ನು ಮುಟ್ಟಿದೆ. 2022ರ ವೇಳೆಗೆ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ದೊರಕಿಸಿಕೊಡಲು ಅಟಲ್ ಭೂ ಜಲ ಮತ್ತು ಜಲಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ವಿನಯ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ವಿವೇಕಾನಂದ, ಚೆನ್ನಪ್ಪ, ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ಬಿಡಗಲು ರಾಜು, ಟೌನ್ ಅಧ್ಯಕ್ಷ ನಂದೀಶ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net