

ಶಿವಮೊಗ್ಗ: ಬಿಜೆಪಿ ಸರ್ಕಾರ ಅಧಿಕಾರಲ್ಲಿದ್ದಾಗ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಂಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅದನ್ನು ಕಡಿತಗೊಳಿಸಿ ಹಿಂದುಳಿದವರಿಗೆ ಅನ್ಯಾಯ ಮಾಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.
ಅಂಬೇಡ್ಕರ್ ಭವನದಲ್ಲಿ ಭಾನುವಾರ ಮಾದಿಗ ಮುನ್ನಡೆಯಿಂದ ಒಳಮೀಸಲಾತಿಗೆ ಮಾದಿಗರ ಆತ್ಮಗೌರವದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಶಿಾರಸ್ಸು ಮಾಡಿದ್ದ ಮೀಸಲಾಯಿತಿಯನ್ನು ಶೇ. 17ರಿಂದ 15ಕ್ಕೆ ಇಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಈ ಮೂಲಕ ಜೇನುಗೂಡಿಗೆ ಕಲ್ಲು ಹೊಡೆದು ಅನ್ಯಾಯ ಮಾಡಿದೆ. ಇದರಿಂದ ಎಲ್ಲ ಸಮುದಾಯಗಳಿಗೂ ಅನ್ಯಾಯವಾಗಲಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮೀಸಲಾತಿ ಹೆಚ್ಚಳ ತಡ ಮಾಡುವ ಷಡ್ಯಂತರ ಇದಾಗಿದೆ ಎಂದರು.
ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಹೆಚ್ಚಳ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಾರಸ್ಸು ಮಾಡಲಾಗಿತ್ತು. ಆದರೆ ಈ ಸರ್ಕಾರ ಅದಕ್ಕೆ ಮನ್ನಣೆ ನೀಡಿಲ್ಲ. ಸ್ವಾತಂತ್ರ್ಯ ನಂತರ 75 ವರ್ಷದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಪರಿಷ್ಕರಿಸಲು ಕ್ರಮಕೈಗೊಂಡಿಲ್ಲ. ಮೀಸಲಾತಿ ಹೆಚ್ಚಳದ ಬಗ್ಗೆ ಕೇಳಿದರೆ ಕೊಡಿಡುತ್ತೇವೆ, ಕೊಡಿಸುತ್ತೇವೆ, ಹೆಚ್ಚಳ ಮಾಡುವವರ ಬಳಿ ಕರೆದುಕೊಂಡು ಹೋಗುತ್ತೇವೆಂದು ಸುಳ್ಳು ಹೇಳಿಕೊಂಡು ಬಂದಿದೆ. ಅದರ ಮುಂದುವರಿದ ಭಾಗವಾಗಿ ಈಗ ಮೀಸಲಾತಿ ಕಡಿತ ಮಾಡಿದೆ ಎಂದು ದೂರಿದರು.
ನಿವೃತ್ತ ಇಂಜಿನಿಯರ್ ಶಿಕಾರಿಪುರ ಶಿವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾದಿಗ ದಂಡೋರ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಂ.ಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಎನ್.ರವಿಕುಮಾರ್, ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್.ಮೋಹನ್‌ಕುಮಾರ್, ಮುಖಂಡರಾದ ಶಿವರಾಜ್, ಗವಿಸಿದ್ದಪ್ಪ ದ್ಯಾಮಣ್ಣವರ್, ಸಿ.ಮೂರ್ತಿ, ಎಚ್.ಶಿವಾಜಿ, ಹೊಳೆಹೊನ್ನೂರಿನ ರಮೇಶ್, ಸಾಗರದ ರೇವಪ್ಪ, ಗಾಮದ ಹೊಳೆಯಪ್ಪ, ಶಾಂತಮ್ಮ ಉಪಸ್ಥಿತರಿದ್ದರು.