ಹೊಸ ಆಡಳಿತ ಕಚೇರಿ ನಿರ್ಮಾಣಕ್ಕೆ ಮೂರು ವರ್ಷ ಗಡು

Vidhanasoudha
Published on

ಬೆಂಗಳೂರು: ಮುಂದಿನ ಮೂರು ವರ್ಷದಲ್ಲಿ ಎಲ್ಲಾ 64 ಹೊಸ ತಾಲೂಕುಗಳಿಗೂ ಸ್ವಂತ ಆಡಳಿತ ಕಚೇರಿ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದರು.

ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಬೈರೇಗೌಡ, ಹೊಸ ತಾಲೂಕುಗಳಲ್ಲಿ ಎಲ್ಲಾ ಇಲಾಖೆಗಳ ಕಚೇರಿಗಳನ್ನು ಆರಂಭಿಸುವ ಬಗ್ಗೆ ನಾನು ಉತ್ತರ ನೀಡುವುದು ಸಮಂಜವಲ್ಲ. ಮುಖ್ಯಮಂತ್ರಿಯವರ ಕಡೆಯಿಂದ ಉತ್ತರ ಕೊಡಿಸಲು ಪ್ರಯತ್ನಿಸುತ್ತೇನೆ. ಆದರೆ, ಹೊಸ ತಾಲೂಕುಗಳಿಗೆ ಸ್ವಂತ ಆಡಳಿತ ಕಚೇರಿ ನಿರ್ಮಾಣದ ಬಗ್ಗೆ ಸರ್ಕಾರ ಗಂಭೀರವಾಗಿದ್ದು, ಮುಂದಿನ ಮೂರು ವರ್ಷದಲ್ಲಿ ಪೂರೈಸಲಾಗುವುದು ಎಂದರು.

ಹೊಸ ತಾಲೂಕುಗಳು ರಚನೆಯಾಗಿ 6 ವರ್ಷಗಳಾಗಿದ್ದರೂ 14 ತಾಲೂಕುಗಳಲ್ಲಿ ಮಾತ್ರ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಉಳಿದ ತಾಲೂಕುಗಳಿಗೆ ಇನ್ನೂ ಸರ್ಕಾರಿ ಕಟ್ಟಡಗಳು ಮಂಜೂರೇ ಆಗಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net