

Congress Govt: ಅಹಿಂದ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪರಿಶಿಷ್ಟರ ಕರಾಳ ದಿನಕ್ಕೆ ಕಾರಣರಾಗಿದ್ದಾರೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.
ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿರುವ ಈ ಸರ್ಕಾರ ಶೋಷಿತರ ಕಣ್ಣಲ್ಲಿ ನೀರು ಹರಿಸಿದರೆ ಆ ಶಾಪ ನಿಮ್ಮ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಹರಿಹಾಯ್ದರು.