ಸರಿಯಾಗಿ ಚಿಕಿತ್ಸೆ ನೀಡದೆ ಖಾಸಗಿ ಆಸ್ಪತ್ರೆಗೆ ಕಳಿಸಿದ ವೈದ್ಯರು; ಮಾರ್ಗಮಧ್ಯದಲ್ಲೇ ಪ್ರಾಣ ಬಿಟ್ಟ ಗರ್ಭಿಣಿ

The doctor sent her to a private hospital without proper treatment and the pregnant woman died on the way
Published on

ಕೋಲಾರ: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲ್ಯಕ್ಷ ಆರೋಪ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.

ಭಾರತಿ(26) ಮೃತ ಮಹಿಳೆ, ಈಕೆ ಬಂಗಾರಪೇಟೆ, ವಿಜಯನಗರ ನಿವಾಸಿಯಾಗಿದ್ದಾರೆ. ಮೃತ ಮಹಿಳೆ ಸಂಬಂಧಿಕರು ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಂಜುನಾಥ್​ ಎಂಬುವರ ಪತ್ನಿ ಭಾರತಿಗೆ ನಿನ್ನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ವೈದ್ಯರು ನಿರ್ಲ್ಯಕ್ಷ ತೋರಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡದೆ ಕೊನೆ ಹಂತದಲ್ಲಿ ಖಾಸಗಿ ಆಸ್ಪತ್ರೆಗೆ ಕಳಿಸಿದ್ದಾರೆ.

ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ‌ಮಗುವಿನ ಪ್ರಾಣವನ್ನು ಕಾಪಾಡಿದ್ದಾರೆ. ಮಹಿಳೆಯನ್ನು ಕಳೆದುಕೊಂಡ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಬಂಗಾರಪೇಟೆ ಪೊಲೀಸ್​ ಠಾಣೆಗೆ ದೂರು ದಾಖಲಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net