ಆಸ್ಪತ್ರೆಗೆ ಬೀಗ ಜಡಿದು ಪಾನಿಪುರಿ ಮಾರುತ್ತಿರುವ ವೈದ್ಯರು; ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!

The doctor who locked the hospital and put Panipuri cart
Published on

ರಾಜಸ್ಥಾನ: ವೈದ್ಯರು ರೋಗಿಯ ಜೀವ ಕಾಪಾಡುವಲ್ಲಿ ತುಂಬಾ ಮುಖ್ಯವಾದ ಪಾತ್ರ ವಹಿಸುತ್ತಾರೆ. ಆದರೆ ಸಿಕರ್ ಜಿಲ್ಲೆಯ ಮಹಿಳಾ ವೈದ್ಯರೊಬ್ಬರು ಆಸ್ಪತ್ರೆಗೆ ಬೀಗ ಜಡಿದು ಪಾನಿಪುರಿ ಗಾಡಿಯನ್ನು ರಸ್ತೆಗಿಳಿಸಿದ್ದಾರೆ.

ವೈದ್ಯರ ಜೊತೆ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೂ ಪಾನಿಪುರಿ ಗಾಡಿಯ ಪಕ್ಕದಲ್ಲಿಯೇ ಟೀ ಅಂಗಡಿ ಹಾಕಿಕೊಂಡು ಟೀ ಮಾರುತ್ತಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಖಾಸಗಿ ಆಸ್ಪತ್ರೆಗಳ ಅನೇಕ ವೈದ್ಯರು ಮತ್ತು ಸಿಬ್ಬಂದಿ ರಸ್ತೆಗಳಲ್ಲಿ ಪಾನಿ ಪುರಿ ಮತ್ತು ಚಹಾವನ್ನು ಮಾರುತ್ತಿದ್ದಾರೆ. ಬದುಕಲು ಮತ್ತು ಹಣ ಸಂಪಾದಿಸಲು ಮಾಡುವ ಕೆಲಸಗಳಲ್ಲ. ಸರ್ಕಾರ ನೀಡಿದ ಶಾಕ್ ನಿಂದಾಗಿ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದಿದ್ದು, ಆಸ್ಪತ್ರೆ ವೈದ್ಯರು ಸಿಬ್ಬಂದಿಯೊಂದಿಗೆ ರಸ್ತೆಗಿಳಿದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜಸ್ಥಾನದ ಸಿಎಂ ಅಶೋಕ್‌ ಗೆಹೋಟ್‌ ಸರ್ಕಾರ ಇತ್ತೀಚೆಗೆ ಹೊಸ ಮಸೂದೆಯನ್ನು ತಂದಿದೆ. ಈ ಮಸೂದೆಯ ಪ್ರಕಾರ, ಪ್ರತಿಯೊಬ್ಬ ನಾಗರಿಕರು ತುರ್ತು ಸಂದರ್ಭದಲ್ಲಿ ಯಾವುದೇ ಶುಲ್ಕವನ್ನು ಪಾವತಿಸದೆ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದಿದ್ದಾರೆ. ಈ ಕಾಯ್ದೆ ವಿರೋಧಿಸಿ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net