ಚಾಲಕನಿಗೆ ಹೃದಯಾಘಾತ 30 ವಿದ್ಯಾರ್ಥಿಗಳು ಪಾರು

16-68d2e6d324036
Published on

ವಿಜಯವಾಡ: ಶಾಲಾ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಅಪಘಾತಕ್ಕೀಡಾದರೂ ಬಸ್​ನಲ್ಲಿದ್ದ 30 ವಿದ್ಯಾರ್ಥಿಗಳು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ.

ಶಾಲಾ ಬಸ್ ರಾಮವರಪಡುವಿನಿಂದ ಗಣದಲಕ್ಕೆ ತೆರಳುತ್ತಿತ್ತು. ಈ ವೇಳೆ ಚಾಲಕನಿಗೆ ಹೃದಯಾಘಾತವಾಗಿದೆ. ಹೀಗಾಗಿ ನಿಯಂತ್ರಣ ತಪ್ಪಿದ ಬಸ್ ಅಡ್ಡಾದಿಡ್ಡಿ ಚಲಿಸಿದ್ದು, ದ್ವಿಚಕ್ರ ವಾಹನ ಮತ್ತು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಂತಿದೆ. ತಕ್ಷಣ ಸ್ಥಳೀಯರು ಮತ್ತು ಸಂಚಾರ ಪೊಲೀಸರು ಚಾಲಕನಿಗೆ ಸಿಪಿಆರ್ ನೀಡಿ ಆಸ್ಪತ್ರೆಗೆ ರವಾನಿಸಿದ್ದು, ಮಕ್ಕಳನ್ನು ರಕ್ಷಿಸಿದ್ದಾರೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರನಿಗೆ ಗಾಯಗಳಾಗಿವೆ. ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net