ಪರಶುರಾಮಪುರ ತಾಲೂಕಿಗಾಗಿ ಹೋರಾಟ ಇಂದು

SOMAGUDDU RANGASWAMY
Published on

ಪರಶುರಾಮಪುರ: ಪರಶುರಾಮಪುರ ತಾಲೂಕು ಘೋಷಣೆಗೆ ಒತ್ತಾಯಿಸಿ ಆ.17ರಂದು ಚಳ್ಳಕೆರೆಯಲ್ಲಿ ರೈತ ಸಂಘ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ನಗರದ ಚಳ್ಳಕೇರಮ್ಮ ದೇವಸ್ಥಾನದಿಂದ ಪ್ರತಿಭಟನೆ ಆರಂಭಗೊಂಡು ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ, ಬಳಿಕ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಗುವುದು. ಹೋಬಳಿ ವ್ಯಾಪ್ತಿಯ 52 ಹಳ್ಳಿಗಳ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಗುದ್ದು ರಂಗಸ್ವಾಮಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net