

Gadar-2 collection:ದ 'ಗದರ್: ಏಕ್ ಪ್ರೇಮ್ ಕಥಾ' (Gadar: Ek Prem Katha) ಸೀಕ್ವೆಲ್ ಇದೇ 11 ರಂದು ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ಚಿಂದಿ ಉಡಾಯಿಸಿದೆ. ಈ ಚಿತ್ರದ ಮೊದಲ ಭಾಗ 2001ರ ಜೂನ್ 15ರಂದು ಬಿಡುಗಡೆಯಾಗಿತ್ತು. ಆಗಲೂ ಇದೇ ರೀತಿಯ ನಾಗಾಲೋಟದಲ್ಲಿ ಓಡಿದ್ದ ಚಿತ್ರ ಈಗ ಪಾರ್ಟ್-1 ಬಿಡುಗಡೆಯಾದ ಬರೋಬ್ಬರಿ 21 ವರ್ಷಗಳ ನಂತರ ಪಾರ್ಟ್-2 ಬಿಡುಗಡೆಯಾದಾಗಲೂ ಭರ್ಜರಿ ಯಶಸ್ಸಿನತ್ತ ಸಾಗುತ್ತಿದೆ.
ಈ ಚಿತ್ರ ಮತ್ತೊಮ್ಮೆ ಬಿಡುಗಡೆಯಾದರೆ ಇಷ್ಟೊಂದು ಹಂಗಾಮ ಸೃಷ್ಟಿಸಬಹುದು ಎಂದು ಖುದ್ದು ನಿರ್ದೇಶಕ ಅನಿಲ್ ಶರ್ಮಾ ಯೋಚಿಸಿರಲಿಲ್ಲ. ಜನಕ್ಕೆ ಈ ಸಿನಿಮಾ ಇಷ್ಟವಾಗಿದ್ದು ದೇಶದೆಲ್ಲೆಡೆ ಚರ್ಚೆ ಶುರುವಾಗಿದೆ. ಗಳಿಕೆಯಲ್ಲಿ ಚಿತ್ರ ದಾಖಲೆ ನಿರ್ಮಿಸಿದೆ.
19 ಕೋಟಿ ಬಜೆಟ್‌ನಲ್ಲಿ ತಯಾರಾದ ಈ ಚಿತ್ರ 2001ರಲ್ಲಿ ಬಿಡುಗಡೆಯಾದಾಗ ವಿಶ್ವದಾದ್ಯಂತ 133 ಕೋಟಿ ಗಳಿಸಿತ್ತು. ಮೊದಲ ವಾರದ ಗಳಿಕೆಯಲ್ಲಿ ಪಠಾಣ್ ದಾಖಲೆಯನ್ನೂ ಉಡೀಸ್ ಮಾಡಿ ಚಿತ್ರ ಮುನ್ನುಗ್ಗಿತ್ತು.
ಇದೀಗ ಕನ್ನಡದಲ್ಲಿ ಎಲ್ಲಾ ದಾಖಲೆಗಳನ್ನೂ ಹಿಂದಿಕ್ಕಿದ್ದ ಯಶ್ ಅಭಿನಯದ ಕೆಜಿಎಫ್-2 ಚಿತ್ರವನ್ನೂ ಹಿಂದಿಕ್ಕಿ ಗದರ್-2 ಮುನ್ನುಗ್ಗುತ್ತಿದೆ.