ಲೋಕಸಮರಕ್ಕೆ ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

inc
Published on

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ.​ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಒಂದು ವಾರದ ನಂತರ ಕಾಂಗ್ರೆಸ್​ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಹಾ ಶಿವರಾತ್ರಿ ಶುಭದಿನದಂದು ಬಿಡುಗಡೆ ಮಾಡಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್​ ನಾಯಕರಾದ ಕೆ.ಸಿ. ವೇಣುಗೋಪಾಲ್​, ಅಜಯ್​ ಮಾಕೇನ್​, ಪವನ್​ ಖೇರಾ ಪಟ್ಟಿಯನ್ನು ಬಿಡುಗಡೆ ಮಾಡಿದರು. ವಯನಾಡ್​ನಿಂದ ರಾಹುಲ್​ ಗಾಂಧಿ ಎರಡನೇ ಬಾರಿ ಸ್ಪರ್ಧಿಸಲಿದ್ದಾರೆ. ಹಾಗೂ ಅಲೆಪ್ಪಿ ಕ್ಷೇತ್ರದಿಂದ ಕೆ.ಸಿ. ವೇಣುಗೋಪಾಲ್​ ಅವರು ಸ್ಪರ್ಧಿಸಲಿದ್ದಾರೆ.

ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.

ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ: ಕರ್ನಾಟಕದ 7 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಲಾಗಿದೆ.

ವಿಜಯಪುರ: ಎಚ್​.ಆರ್.ಅಲಗೂರು

ಶಿವಮೊಗ್ಗ: ಗೀತಾ ಶಿವರಾಜ್​ಕುಮಾರ್​

ಹಾಸನ: ಶ್ರೇಯಸ್​ ಪಾಟೀಲ್

ತುಮಕೂರು: ಎಸ್​ಪಿ ಮುದ್ದಹನುಮೇಗೌಡ

ಬೆಂಗಳೂರು ಗ್ರಾಮಾಂತರ: ಡಿಕೆ ಸುರೇಶ್

ಹಾವೇರಿ: ಆನಂದ್​ಸ್ವಾಮಿ ಗಡ್ಡ ದೇವರಮಠ

ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)

ತೆಲಂಗಾಣದಿಂದ ನಾಲ್ಕು ಸ್ಥಾನಕ್ಕೆ ಪಟ್ಟಿ ಬಿಡುಗಡೆ

ಈ ಪಟ್ಟಿಯಲ್ಲಿ ತೆಲಂಗಾಣದ ನಾಲ್ಕು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಜಹೀರಾಬಾದ್ ಕ್ಷೇತ್ರ- ಸುರೇಶ್ ಕುಮಾರ್ ಶೆಟ್ಕರ್, ಚೇವೆಲ್ಲಾ ಕ್ಷೇತ್ರ ಸುನೀತಾ ಮಹೇಂದರ್ ರೆಡ್ಡಿ, ನಲ್ಗೊಂಡ ಕ್ಷೇತ್ರ- ಕುಂದೂರು ರಘುವೀರ್, ಮಹಬೂಬಾಬಾದ್ ಕ್ಷೇತ್ರ (ಎಸ್‌ಟಿ )- ಪೋರಿಕ ಬಲರಾಮ್ ನಾಯಕ್​ಗೆ ಟಿಕೆಟ್​ ನೀಡಲಾಗಿದೆ.

ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ

  • ವಯನಾಡ್ (ಕೇರಳ): ರಾಹುಲ್ ಗಾಂಧಿ
  • ಕಾಸರಗೋಡು (ಕೇರಳ): ರಾಜಮೋಹನ್ ಉಣ್ಣಿತ್ತಾನ್
  • ಕಣ್ಣೂರು (ಕೇರಳ): ಕೆ ಸುಧಾಕರನ್
  • ವಡಕರ (ಕೇರಳ): ಶಫಿ ಪರಂಬಿಲ್
  • ಕೋಝಿಕ್ಕೋಡ್ (ಕೇರಳ): ಎಂಕೆ ರಾಘವನ್
  • ಪಾಲಕ್ಕಾಡ್ (ಕೇರಳ): ವಿಕೆ ಶ್ರೀಕಂಠನ್
  • ಅಲತೂರ್(ಎಸ್‌ಸಿ) (ಕೇರಳ): ರೆಮ್ಯಾ ಹರಿದಾಸ್
  • ತ್ರಿಶೂರ್ (ಕೇರಳ): ಕೆ ಮರಳೀಧರನ್
  • ಚಾಲಕ್ಕುಡಿ (ಕೇರಳ): ಬೆನ್ನಿ ಬಹನ್ನಾನ್
  • ಎರ್ನಾಕುಲಂ(ಕೇರಳ): ಹಿಬಿ ಇಡೆನ್
  • ಇಡುಕ್ಕಿ(ಕೇರಳ): ಡೀನ್ ಕುರಿಯಾಕೋಸ್
  • ಮಾವೇಲಿಕರ(ಎಸ್‌ಸಿ)(ಕೇರಳ): ಕೋಡಿಕುನ್ನಿಲ್ ಸುರೇಶ್
  • ಪಟ್ಟಣಂತಿಟ್ಟ(ಕೇರಳ): ಆ್ಯಂಟೋ ಆ್ಯಂಟೋನಿ
  • ಅತ್ತಿಂಗಲ್(ಕೇರಳ): ಅಡೂರ್ ಪ್ರಕಾಶ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net