

ಶಿವಮೊಗ್ಗ: ನಗರದ ಬಿ.ಎಚ್.ರಸ್ತೆಯಲ್ಲಿ ಫುಟ್‌ಪಾತ್‌ನಲ್ಲಿದ್ದ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ ಜಾಗದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತೆ ಗಿಡಗಳನ್ನು ನೆಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ನಗರದ ಬಿ.ಎಚ್.ರಸ್ತೆಯ ಫುಟ್‌ಪಾತ್‌ನಲ್ಲಿದ್ದ ಎರಡು ಕಾಡು ಬಾದಾಮಿ ಮರಗಳನ್ನು ಮಂಗಳವಾರ ತಡರಾತ್ರಿ ದುಷ್ಕರ್ಮಿಗಳು ಧರೆಗುರುಳಿಸಿದ್ದರು. ಮರುದಿನ ಸುದ್ದಿ ತಿಳಿಯುತ್ತಿದ್ದಂತೆ ಪರಿಸರ ಪ್ರೇಮಿಗಳು ಪ್ರತಿಭಟಿಸಿದ್ದರು.
ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ, ನಗರ ಪಾಲಿಕೆ ಅಧಿಕಾರಿಗಳು ಅಪರಾಧಿಗಳನ್ನು ಹುಡುಕುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ಗಿಡಗಳನ್ನು ನೆಡುವುದಾಗಿ ಮಾತು ಕೊಟ್ಟಿದ್ದರು. ಅದರಂತೆ ಬುಧವಾರ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಗುರುವಾರ ಬೆಳಗ್ಗೆ ಅರಣ್ಯ ಅಧಿಕಾರಿಗಳು ಮರಕಡಿತಲೆ ಮಾಡಿದ ಜಾಗ ಹಾಗೂ ಅಕ್ಕಪಕ್ಕದ ಜಾಗದಲ್ಲೂ 10 ಗಿಡಗಳನ್ನು ನೆಟ್ಟರು. ಅರಣ್ಯ ಇಲಾಖೆಯ ಶಂಕರ ವಲಯದ ಆರ್‌ಎ್ಒ ವಿಜಯಕುಮಾರ್, ಡಿಆರ್‌ಎ್ಒ ನರೇಂದ್ರ ಮತ್ತಿತರ ಅಧಿಕಾರಿಗಳು ಗಿಡ ನೆಡುವ ಕಾರ್ಯದಲ್ಲಿ ಭಾಗಿಯಾಗಿದ್ದರು.