ಕೈ ಸರ್ಕಾರ ಇರೋವರೆಗೂ ಗ್ಯಾರಂಟಿ ನಿಶ್ಚಿತ

Bairathi Suresh
Published on

ಕೋಲಾರ: ಪ್ರತಿ ಪಕ್ಷದವರಾದಿಯಾಗಿ ಯಾರು ಏನೇ ಹೇಳಿದರೂ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವವರೆಗೂ ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು.

ನಗರದಲ್ಲಿ ಗುರುವಾರ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಪಕ್ಷದವರು ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಸೌಲಭ್ಯ ಪಡೆದುಕೊಳ್ಳುತ್ತಿರುವ ಫಲಾನುಭವಿಗಳು ಖುಷಿಯಿಂದ ಇದ್ದಾರೆ ಅಷ್ಟೇ ಸಾಕು ಎಂದರು.
ಪ್ರತಿ ಪಕ್ಷ ನಾಯಕ ಆರ್. ಅಶೋಕ್ ಅವರಿಗೆ ಯೋಜನೆಗಳ ವಿಚಾರ ಗೊತ್ತಿಲ್ಲ. ಎಲ್ಲೆಲ್ಲೋ ಎಸಿ ರೂಂನಲ್ಲಿ ಕುಳಿತು ಮಾತನಾಡುವುದಲ್ಲ. ಜನರ ನಡುವೆ ಬಂದು ಅಭಿವೃದ್ಧಿ ಕೆಸಲಗಳನ್ನು ಗಮನಿಸಲಿ ಎಂದರು.
ಸಿಎA ಸಿದ್ದರಾಮಯ್ಯ ಅವರೇ ಹೇಳಿದ್ದಾರೆ ಗ್ಯಾರಂಟಿ ಯೋಜನೆಗಳಲ್ಲಿ ಬದಲಾವಣೆ ಇಲ್ಲ ಎಂದು. ಅಕ್ರಮವಾಗಿ ಪಡಿತರ ಚೀಟಿ ಪಡೆದುಕೊಂಡಿರುವವರು ಸಿಕ್ಕಿದರೆ ಕ್ರಮಕೈಗೊಳ್ಳಬಹುದೇ ಹೊರತು, ಅಭಿಪ್ರಾಯ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

  • ತಪ್ಪೆಸಗಿದರೆ ಪರವಾನಗಿ ರದ್ದು
    ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ತಡೆಗಟ್ಟಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಸಹ ಧ್ವನಿ ಎತ್ತಿದ್ದಾರೆ. ಸದನದಲ್ಲೂ ಈ ಬಗ್ಗೆ ಚರ್ಚೆಯಾಗಿದೆ, ಈಗಾಗಲೇ ಲೈಸನ್‌ಗಳನ್ನು ವಿತರಿಸಿರುವುದನ್ನು ಮತ್ತೊಮ್ಮೆ ಪರಿಶೀಸಿ ತಪು÷್ಪಗಳು ಆಗಿದ್ದರೆ ಅಂತಹ ಪರವಾನಗಿಯನ್ನು ರದ್ದುಗೊಳಿಸಲು ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
  • ಭ್ರಷ್ಟಾಚಾರ ಸಹಿಸಲ್ಲ
    ನಗರಸಭೆಯಲ್ಲಿ ಅಕ್ರಮವಾಗಿ ಖಾತೆ ವಿತರಣೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ನಗರಸಭೆಯು ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಭ್ರಷ್ಟಾಚಾರ ನಡೆದರೆ ಸಹಿಸುವುದಿಲ್ಲ. ಅಕ್ರಮ ಖಾತೆ ವಿತರಣೆ ಕುರಿತು ತನಿಖೆ ನಡೆಸಿ, ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆ ವಿಧಿಸುವ ಪ್ರಯತ್ನ ಮಾಡುತ್ತೇನೆ ಎಂದು ಬೈರತಿ ಸುರೇಶ್ ಹೇಳಿದರು.
  • ಪ್ರತ್ಯೇಕ ಕಾನೂನು ಜಾರಿಗೆ ಕ್ರಮ
    ಸಸಿಗಳನ್ನು ಮಾರಾಟ ಮಾಡುವ ನರ್ಸರಿಗಳು ಯಾವುದೇ ಇಲಾಖೆ ವ್ಯಾಪ್ತಿಯಲ್ಲಿಲ್ಲ. ಅವರು ಕಳಪೆ ಬಿತ್ತನೆ ಬೀಜ ಬಿತ್ತಿ ಸಸಿಗಳನ್ನು ರೈತರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರು ಬಂದಿವೆ. ಕೃಷಿ, ತೋಟಗಾರಿ ಇಲಾಖೆಯ ಅಧಿಕಾರಿಗಳಿಗೂ ಇದು ತಲೆ ನೋವಾಗಿದ್ದು, ನರ್ಸರಿಗಳನ್ನು ನಿಯಂತ್ರಿಸಲು ಪ್ರತ್ಯೇಕ ಕಾನೂನು ಜಾರಿ ಮಾಡಲು ಸರ್ಕಾರದಮಟ್ಟದಲ್ಲಿ ಚರ್ಚೆಯಾಗಿದೆ. ಟೊಮ್ಯಾಟೊ ಸೇರಿ ತೋಟಗಾರಿಕೆ ಬೆಳೆಗಳಲ್ಲಿ ಇಳುವರಿ ಕುಂಠಿತವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ, ಇದಕ್ಕೆ ಕಾರಣ ಏನು ಎಂದು ಪತ್ತೆ ಹಚ್ಚಲು ತಂಡ ರಚಿಸಲಾಗಿದ್ದು, ವರದಿ ಬಂದ ಕೂಡಲೇ ಸರ್ಕಾರದಿಂದ ರೈತರಿಗೆ ತರಬೇತಿ ಕೊಡಿಸುವ ಕೆಲಸ ಮಾಡಲಾಗುವುದು ಎಂದು ಬೈರತಿ ಸುರೇಶ್ ತಿಳಿಸಿದರು.
  • ಸಾಲ ವಿತರಿಸದಿದ್ದರ ಕ್ರಮ
    ಡಿಸಿಸಿ ಬ್ಯಾಂಕ್‌ನಿಂದ ಮಹಿಳಾ ಸಂಘಗಳಿಗೆ, ರೈತರಿಗೆ ಸಾಲ ವಿತರಣೆ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹಾಗೂ ಚೇಳೂರು ತಾಲೂಕುಗಳನ್ನು ಒಳಗೊಂಡಂತೆ ಚುನಾವಣೆ ನಡೆಸಲು ಕ್ರಮವಹಿಸಿದ್ದರಿಂದ ತಡವಾಗಿದೆ. ಇದೀಗ ಚುನಾವಣೆ ನಡೆಸಲು ಹೈಕೋರ್ಟ್ ಆದೇಶಿಸಿದ್ದು, ಅದರ ಪ್ರಕಾರ ಚುನಾವಣೆ ನಡೆಯುತ್ತದೆ ಎಂದು ಬೈರತಿ ಸುರೇಶ್ ತಿಳಿಸಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್ಸಿ ನಜೀರ್ ಅಹ್ಮದ್, ಶಾಸಕ ಕೊತ್ತೂರು ಜಿ.ಮಂಜುನಾಥ್, ಎಂಎಲ್ಸಿ ಎಂ.ಎಲ್.ಅನಿಲ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net