5,8,9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಕೋರ್ಟ್​ ಅನುಮತಿ

sslc
Published on

ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೂಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿ ಹಿಡಿದಿದೆ.

ಮಾ.06 ಬುಧವಾರ ರಂದು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್ ಮೂಲಕ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

ಆದರೆ ಈ ಕುರಿತು ಮೇಲ್ಮನವಿ ಸಲ್ಲಿಕೆಯಾಗಿದ್ದ ಕಾರಣ ಇಂದು ವಿಚಾರಣೆ ನಡೆಸಿದ ವಿಭಾಗೀಯ ಪೀಠ ಬುಧವಾರ ಏಕದಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ.

ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ 2023ರ ಅ.6 ಮತ್ತು 9ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಆದರೆ ಈ ಸುತ್ತೋಲೆಯನ್ನು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಹಾಗೂ ‘ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ ಹೊಸಮಿ ಅವರ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ಸುತ್ತೋಲೆಯನ್ನು ರದ್ದು ಮಾಡಿ ಮಹತ್ವದ ತೀರ್ಪು ನೀಡಿತ್ತು.

ಆದರೆ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ವಿಭಾಗೀಯ ಪೀಠ ಸರ್ಕಾರದ ಸುತ್ತೋಲೆಯನ್ನು ಎತ್ತಿಹಿಡಿದಿದೆ. ಬೋರ್ಡ್ ಪರೀಕ್ಷೆಗೆ ಅನುಮತಿ ನೀಡುವ ಮೂಲಕ ಏಕಸದಸ್ಯ ನೀಡಿದ ಆದೇಶಕ್ಕೆ ತಡೆ ನೀಡಿದೆ. ಸರ್ಕಾರ ಹಾಗೂ ಶಾಲಾ ಆಡಳಿತ ಮಂಡಳಿಗಳ ಸಂಘಟನೆಗಳ ಹಗ್ಗಜಗ್ಗಾಟದಿಂದ ಈ ವರ್ಷವೂ ವಿದ್ಯಾರ್ಥಿಗಳು ಗೊಂದಲಕ್ಕೆ ಸಿಲುಕಿದ್ದರು. ಆದರೆ ಪರೀಕ್ಷೆಕೆ ಮೂರು ದಿನ ಬಾಕಿ ಇರುವಂತೆ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ. ಮಾ.11ರಿಂದ 5,8,9,11 ತರಗತಿಗಳ ಪರೀಕ್ಷೆಗಳು ಆರಂಭಗೊಳ್ಳುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net