ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ

chamundi hills
Published on


ಚಾಮುಂಡಿ ಬೆಟ್ಟ ಒಂದು ಧಾರ್ಮಿಕ ಕ್ಷೇತ್ರ. ಅಲ್ಲಿಗೆ ರೋಪ್ ವೇ ಅಗತ್ಯವಿಲ್ಲ. ಚಾಮುಂಡಿಬೆಟ್ಟದ ಪರಿಸರ ಕಾಪಾಡುವುದು ನಮ್ಮ ಆದ್ಯತೆ ಆಗಿದೆ ಎಂದು ಯದುವೀರ್ ತಿಳಿಸಿದರು.

ವಿಮಾನ ನಿಲ್ದಾಣ ವಿಸ್ತರಣೆ, ಹೆಚ್ಚು ವಿಮಾನಗಳ ಹಾರಾಟ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಮ್ಮ ಭಾಗದ ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಜತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ. ಜತೆಗೆ ಮೈಸೂರಿನ ಪಾರಂಪರಿಕ ಕಟ್ಟಡಗಳ ನಗರವಾಗಿದ್ದು, ದೇವರಾಜ ಮಾರುಕಟ್ಟೆ, ಲ್ಯಾನ್ಸ್ಡೌನ್ ಕಟ್ಟಡಗಳನ್ನು ನೆಲಸಮ ಮಾಡುವ ಅವಶ್ಯಕತೆ ಇಲ್ಲ. ಎರಡೂ ಕಟ್ಟಡಗಳನ್ನು ಸಂರಕ್ಷಣೆ ಮಾಡುತ್ತೇವೆ. ಮೈಸೂರು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಕೈಗಾರಿಕೆಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತೇವೆ. ಅಭಿವೃದ್ಧಿಯ ದೃಷ್ಟಿಯಿಂದ ಅಗತ್ಯಬಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಭೇಟಿ ಆಗುತ್ತೇನೆ ಎಂದು ಹೇಳಿದರು.

ನರಸಿಂಹರಾಜ ಕ್ಷೇತ್ರದಲ್ಲಿ ಪ್ರವಾಸ ಆರಂಭಿಸಿದ್ದೇನೆ. ಆ ಭಾಗದಲ್ಲಿ ಪಾದಯಾತ್ರೆ ನಡೆಸಿ ಜನರ ಸಮಸ್ಯೆ ಆಲಿಸುತ್ತೇನೆ. ಮೈಸೂರು-ಕೊಡಗು ಕ್ಷೇತ್ರ ದೊಡ್ಡ ಕ್ಷೇತ್ರ. ಇಲ್ಲಿ ಜನರನ್ನು ಭೇಟಿಯಾಗುವುದೇ ಸವಾಲಾಗಿದೆ. ಆದರೆ ಸಮಯ ತೆಗೆದುಕೊಂಡು ಜನರನ್ನು ಭೇಟಿ ಆಗುತ್ತೇನೆ. ಭ್ರಷ್ಟಮುಕ್ತ ಕೆಲಸ ಎಂಬ ಧ್ಯೇಯದೊಂದಿಗೆ ಮುಂದುವರಿಯುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net