ಬೆಂಗಳೂರಿಗೆ ಶರಾವತಿ ನೀರು ಕೊಂಡೊಯ್ಯವ ಚಿಂತನೆ ಅವೈಜ್ಞಾನಿಕ: ಬೆಕ್ಕಿನಕಲ್ಮಠಶ್ರೀ

Bekkinakalmathsree
ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ
Published on

ಶಿವಮೊಗ್ಗ: ಶರಾವತಿಯಿಂದ ಬೆಂಗಳೂರಿಗೆ ಕುಡಿಯುವ ನೀರು ಕೊಂಡೊಯ್ಯವ ಚಿಂತನೆ ಅವೈಜ್ಞಾನಿಕವಾಗಿದ್ದು ರಾಜ್ಯ ಸರ್ಕಾರ ಈ ಯೋಜನೆಯನ್ನು ಕೈಬಿಡಬೇಕು ಎಂದು ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಆಗ್ರಹಿಸಿದರು.

ಜಿಲ್ಲಾ ಕೈಗಾರಿಕಾ ಮತ್ತು ಶಿಕ್ಷಣ ತರಬೇತಿ ಕೇಂದ್ರದಲ್ಲಿ ಶ್ರಾವಣ ಚಿಂತನ ಸಮಾರೋಪದಲ್ಲಿ ಆಶೀರ್ವಚನ ನೀಡಿ, ಮಲೆನಾಡಿನಿಂದ ಶರಾವತಿಗೆ ಬೆಂಗಳೂರಿಗೆ ನೀರು ಕೊಂಡೊಯ್ಯುವ ವಿಚಾರ ಪ್ರಸ್ತಾಪವಾಗುತ್ತದೆ. ಈ ಹಿಂದೆ ಈ ಸಂಬಂಧ ಪ್ರತಿಭಟನೆಗಳನ್ನು ನಡೆಸಲಾಗಿತ್ತು. ಬಳಿಕ ಪ್ರಸ್ತಾಪವನ್ನು ನಿಲ್ಲಿಸಿದ್ದರು. ಇದೀಗ ಅವೈಜ್ಞಾನಿಕ ಯೋಜನೆಯನ್ನು ಮತ್ತೆ ಕೈಗೆತ್ತಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶರಾವತಿ ಸೇರಿ ಅನೇಕ ಜಲಾಶಯಗಳ ನಿರ್ಮಾಣಕ್ಕೆ ಮಲೆನಾಡಿನವರು ಸಾಕಷ್ಟು ತ್ಯಾಗ ಮಾಡಿದ್ದಾರೆ. ಮನೆ, ಜಮೀನು ಕಳೆದುಕೊಂಡಿದ್ದಾರೆ. ಆದರೆ ಇಂದಿಗೂ ಅವರಿಗೆ ಪರಿಹಾರ ಕೊಡಲು ಸಾಧ್ಯವಾಗಿಲ್ಲ. ಇಂತಹ ಸಂದರ್ಭದಲ್ಲಿ 560 ಕಿ.ಮೀ.ವರೆಗೆ ನೀರು ಕೊಂಡೊಯ್ಯುವುದು ಅಸಾಧ್ಯ. ಜೋಗದಿಂದ ಸಾಗರಕ್ಕೆ ಪ್ರಾಯೋಗಿಕವಾಗಿ ನೀರು ತಂದಾಗ ಜೋಗದಿಂದ ಸಾಗರವರೆಗಿನ ಎಲ್ಲ ಹಳ್ಳಿಗಳಿಗೂ ನೀರು ಕೊಡಬೇಕಾಯಿತು. ಅದೇ ಪರಿಸ್ಥಿತಿ ಇಲ್ಲಿಯೂ ಉದ್ಭವ ಆಗುವುದರಲ್ಲಿ ಅನುಮಾನವಿಲ್ಲ. ಇದರಿಂದ ಯೋಜನೆ ಯಶಸ್ವಿಯಾಗುವುದೂ ಇಲ್ಲ. ಹಾಗಾಗಿ ಅವೈಜ್ಞಾನಿಕ ಯೋಜನೆಯನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net