ಮಹನೀಯರ ಆದರ್ಶಗಳು ಎಲ್ಲರಿಗೂ ಸ್ಫೂರ್ತಿದಾಯಕ

07 HANUR 2
ಹನೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಉಮೇಶ್, ರಮೇಶ್, ಶಶಿಕಲಾ, ಶೋಭಾ, ರಾಜೇಂದ್ರ, ಲಿಂಗರಾಜು, ಸುರೇಶ್ ಇತರರು ಇದ್ದರು.
Published on

ಹನೂರು: ಮಹಾನ್ ನಾಯಕರ ಜಯಂತಿಗಳು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಅವರ ಆದರ್ಶಗಳು ಎಲ್ಲರಿಗೂ ಸ್ಫೂರ್ತಿದಾಯಕ. ಉತ್ತಮ ಸಮಾಜಕ್ಕೆ ದಾರಿದೀಪ ಎಂದು ತಾಲೂಕು ಪಂಚಾಯಿತಿ ಇಒ ಉಮೇಶ್ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ,

ಮಹರ್ಷಿ ವಾಲ್ಮೀಕಿ ಅವರು ರಚಿಸಿರುವ ರಾಮಾಯಣವು ಹಿಂದು ಧರ್ಮದ ಪವಿತ್ರ ಗ್ರಂಥವಾಗಿದ್ದು, 24 ಸಾವಿರ ಶ್ಲೋಕಗಳನ್ನು ಒಳಗೊಂಡಿರುವ ಶ್ರೇಷ್ಠ ಕೃತಿಯಾಗಿದೆ. ಇದರಲ್ಲಿ ಕ್ರೌರ್ಯ, ಹಿಂಸೆ ಸಮಾಜಕ್ಕೆ ಮಾರಕ. ಜೀವನದಲ್ಲಿ ಸುಖ-ಶಾಂತಿಯನ್ನು ಪಡೆಯಬೇಕಾದರೆ ನೈತಿಕತೆಯ ಚೌಕಟ್ಟಿನಲ್ಲಿ ನಡೆಯಬೇಕು. ಸಮಾಜದಲ್ಲಿ ಸುಸಂಸ್ಕೃತ ವ್ಯಕ್ತಿಯಾಗಿ ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಆದರ್ಶ, ತತ್ವಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.

ಕಚೇರಿ ವ್ಯವಸ್ಥಾಪಕ ರಮೇಶ್, ಲೆಕ್ಕ ಸಹಾಯಕಿ ಶಶಿಕಲಾ, ನೌಕರರಾದ ಶೋಭಾ, ರಾಜೇಂದ್ರ, ಲಿಂಗರಾಜು, ದಿನಾಕರ್, ಸುರೇಶ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net