ಸರ್ಕಾರ ಅಸ್ಥಿರಗೊಳಿಸುವ ಉದ್ದೇಶ

CM Siddaramaiah
Published on

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದರು.

ಆಪರೇಶನ್ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net