

ರಾಂಚಿ: ಲೈಂಗಿಕ ಕಿರುಕುಳ ಆರೋಪದ ಮೇಲೆ ಜಾರ್ಖಂಡ್ನ ಐಎಎಸ್ ಅಧಿಕಾರಿ ಸೈಯದ್ ರಿಯಾಜ್ ಅಹಮದ್ ಅವರನ್ನು ಅಮಾನತುಗೊಳಿಸಿ ಜಾರ್ಖಂಡ್ ಸರ್ಕಾರ ಆದೇಶಿಸಿದೆ.
ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸೈಯದ್ ಅವರನ್ನು ಕಳೆದ ಮಂಗಳವಾರ ಬಂಧಿಸಲಾಗಿತ್ತು. ಸದ್ಯ 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಜುಲೈ 5 ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ. ಸಂತ್ರಸ್ತೆ ಸೇರಿದಂತೆ 8 ವಿದ್ಯಾರ್ಥಿನಿಯರು ಅಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. (ಏಜೆನ್ಸೀಸ್)