ಮಹಾರಾಷ್ಟ್ರದಲ್ಲಿ ಭಾನುವಾರದಿಂದ ನೈಟ್​ ಕರ್ಫ್ಯೂ ಜಾರಿ: ಕರ್ನಾಟಕಕ್ಕೂ ಕಾಡುತ್ತಿದೆ ಆತಂಕ

Night Curfew
Published on

ಮುಂಬೈ: ಮಹಾರಾಷ್ಟ್ರದಲ್ಲಿ ಕರೊನಾ ವೈರಸ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಉಲ್ಬಣವಾಗುತ್ತಿರುವುದರಿಂದ ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಕರೊನಾ ತಡೆಗಟ್ಟಲು ಮಾರ್ಚ್ 28 ರಿಂದ ನೈಟ್​ ಕರ್ಪ್ಯೂ ಜಾರಿಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಈ ಕುರಿತು ನಿಯಮಾವಳಿಗಳನ್ನು ಒಳಗೊಂಡ ಆದೇಶವನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಲಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಎಲ್ಲ ಮಾಲ್​ಗಳನ್ನು ರಾತ್ರಿ 8 ರಿಂದ ಬೆಳಿಗ್ಗೆ 7ರವರೆಗೆ ಕಡ್ಡಾಯವಾಗಿ ಮುಚ್ಚಬೇಕು ಎಂದು ಆದೇಶಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 35,952 ಹೊಸ ಕರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲೂ ಕೂಡ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ನೈಟ್ ಕರ್ಪ್ಯೂ ಜಾರಿಗೊಳಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net