ವಿರೋಧ ಪಕ್ಷದ ಸಭೆ ಯಶಸ್ವಿಯೆಂದ ಡಿ.ಕೆ. ಶಿವಕುಮಾರ್

dk shivakumar
Published on

ಬೆಂಗಳೂರು: ದೇಶ ನಿರೀಕ್ಷೆ ಮಾಡಿದಂತೆ ಇಂದಿನ ವಿರೋಧ ಪಕ್ಷಗಳ ಸಭೆ ಯಶಸ್ವಿಯಾಗಿ ನಡೆದಿದೆ. ಈ ಸಭೆ ಭಾರತದ ಧ್ವನಿಯಾಗಿತ್ತು. ದೇಶದ ಎಲ್ಲಾ ವಿರೋಧ ಪಕ್ಷಗಳ ನಾಯಕರು ಭಾರತವನ್ನು ರಕ್ಷಣೆ ಮಾಡುವ ತೀರ್ಮಾನ ಮಾಡಿದ್ದಾರೆ ಎಂದರು.

ಬಿಜೆಪಿ ಇಷ್ಟು ದಿನ ಎನ್ ಡಿಎ ಸಭೆ ಕರೆದಿಲ್ಲ. ಅವರು ಈಗ ಎಚ್ಚೆತ್ತುಕೊಂಡಿದ್ದಾರೆ. ಈಗಲಾದರೂ ಎನ್ ಡಿಎ ಸ್ನೇಹಿತರು ಸಂತೋಷವಾಗಿರಬೇಕು. ಇಷ್ಟು ದಿನ ಎನ್ ಡಿಎ ಅಗತ್ಯವಿಲ್ಲ, ವಿರೋಧ ಪಕ್ಷಗಳನ್ನು ಏಕಾಂಗಿಯಾಗಿ ಎದುರಿಸುತ್ತೇನೆ ಎಂದು ಹೇಳುತ್ತಿದ್ದರು. ಈಗ ಅವರ ನಡೆ ನೋಡಿದರೆ ಎಲ್ಲವೂ ಸರಿಯಿಲ್ಲ ಎಂಬುದು ಗೊತ್ತಾಗುತ್ತದೆ. ಅದು ಅವರ ರಾಜಕೀಯ ನಾನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ಇಂಡಿಯಾ ಮೈತ್ರಿಕೂಟಕ್ಕೆ ಯಾರು ನಾಯಕತ್ವ ವಹಿಸಿಕೊಳ್ಳುತ್ತಾರೆ ಎಂದು ಸಮಯ ಉತ್ತರ ನೀಡುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net