

ಬೈಲಕುಪ್ಪೆ : ಪಿರಿಯಾಪಟ್ಟಣ ತಾಲೂಕಿನ ಕಾಡಂಚಿನ ಗ್ರಾಮ ದೊಡ್ಡಹರವೆ ಒಂದನೇ ಬ್ಲಾಕ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ 69ನೆಯ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕುಮಾರಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯ ಶಿಕ್ಷಕ ಜಯಕುಮಾರ್ ಮಾತನಾಡಿ, ಕನ್ನಡ ನಾಡಿನ ನೆಲ-ಜಲ ರಕ್ಷಣೆಗೆ ಪ್ರತಿಯೊಬ್ಬರು ಶ್ರಮಿಸಬೇಕು. ವಿವಿಧ ಸಂಘ-ಸಂಸ್ಥೆಗಳು, ನೂರಾರು ಕವಿ, ಸಾಹಿತಿಗಳು, ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ಕನ್ನಡ ನಾಡು ಏಕೀಕರಣ ಸಾಧಿಸಿತು. ಆ ದಿನವನ್ನು ಪ್ರತಿ ವರ್ಷ ರಾಜ್ಯೋತ್ಸವನಾಗಿ ಕನ್ನಡಿಗರು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.
ಬೈಲಕುಪ್ಪೆ ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ್, ಪಾಲಕರಾದ ಸೋಮಶೇಖರ್, ಸಹ ಶಿಕ್ಷಕರಾದ ಚೈತ್ರಶ್ರೀ, ಮಂಜು, ಭಾರ್ಗವಿ, ಗಾನವಿ, ಶಾಲಾ ಮಕ್ಕಳು ಮತ್ತು ಪಾಲಕರು ಇದ್ದರು.