ಸಚಿವರಿಗೆ ಅಧಿಕಾರ ತ್ಯಾಗ ಸಂದೇಶ!?

DK Shivakumar
Published on

ಬೆಂಗಳೂರು: ಎರಡು ವರ್ಷದೊಳಗೆ ಅಧಿಕಾರ ತ್ಯಾಗ ಮಾಡಬೇಕು ಎಂದು ನಾವು ಕೆಲ ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಮಾಡುತ್ತೇವೆ. ಆದರೆ ಅವರನ್ನ ಬದಲಾಯಿಸಬೇಕೆಂದರೆ ಸಾಕಾಗಿ ಹೋಗುತ್ತದೆ. ನಾವು ನಿಗಮ, ಮಂಡಳಿಗಳ ಅಧ್ಯಕ್ಷರಿಗೆ ಎರಡು ವರ್ಷ ಅವಧಿ ನೀಡಿದ್ದೇವೆ ಎಂದರು.

ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದು, ಸಂಪುಟ ಪುನಾರಚನೆ ಸುಳಿವು ನೀಡಿದ್ದಾರೆಂಬ ಮಾತುಗಳು ಕೇಳಿಬಂದಿವೆ.

ದೆಹಲಿಗೆ ಪ್ರಯಾಣ

ಜಾರ್ಖಂಡ್ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಇದೇ ವೇಳೆ ಪಕ್ಷದ ಹೈಕಮಾಂಡ್ ನಾಯಕರ ಜತೆ ಸಮಾಲೋಚನೆ ನಡೆಸುತ್ತಾರೆಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net