ಮಾದಾರ ಶ್ರೀಗಳ ಪೂರ್ವಾಶ್ರಮದ ತಾಯಿ ಇನ್ನಿಲ್ಲ

CTD 16 DEATH NEWS GANGAMMA-
Published on

ಚಿತ್ರದುರ್ಗ: ನಗರದ ಮಾದಾರ ಚನ್ನಯ್ಯ ಮಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಪೂರ್ವಾಶ್ರಮದ ತಾಯಿ ಗಂಗಮ್ಮ ದುರುಗಪ್ಪ (85) ಬುಧವಾರ ರಾತ್ರಿ ನಿಧನರಾದರು.

ಈಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಹೊಳಲ್ಕೆರೆ ತಾಲೂಕು ಹಿರೇಕಂದವಾಡಿ ನಿವಾಸಿ ಗಂಗಮ್ಮ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.

ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ಸೇರಿ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಹಿರೇಕಂದವಾಡಿಯ ಅವರ ಜಮೀನಿನಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು.

ಸಂತಾಪ: ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಹರಿಹರ ಶಾಸಕ ಹರೀಶ್ ಸೇರಿ ನಾನಾ ಗಣ್ಯರು, ಸಂಘ-ಸಂಸ್ಥೆಗಳ ಮುಖಂಡರು ಮೃತರ ಅಂತಿಮ ದರ್ಶನವನ್ನು ಪಡೆದರು.

ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ಎಚ್.ಆಂಜನೇಯ ಮೊದಲಾದ ಗಣ್ಯರು ಸ್ವಾಮೀಜಿ ಅವರಿಗೆ ದೂರವಾಣಿ ಕರೆ ಮಾಡಿ ತಮ್ಮ ದುಃಖವನ್ನು ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net