

ಬೆಂಗಳೂರು: ಮಹಾಮಾರಿ ಕರೊನಾ ವೈರಸ್ ಪ್ರಸರಣ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಕಳೆದ 24ಗಂಟೆಯಲ್ಲಿ ಒಟ್ಟು 12 ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 600ರ ಗಡಿ ದಾಟಿದೆ.
ಒಟ್ಟು 601 ಕರೊನಾ ಪ್ರಕರಣಗಳಲ್ಲಿ 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 25 ಸೋಂಕಿತರು ಮೃತಪಟ್ಟಿದ್ದಾರೆ.
ಮೇ 1ರಿಂದ ಇಂದು ಸಂಜೆ 5ಗಂಟೆವರೆಗೆ ಒಟ್ಟು ಮೂರು ಸಾವು ಉಂಟಾಗಿದೆ. ಅದರಲ್ಲಿ ಇಂದು ಮೃತಪಟ್ಟ 63 ವರ್ಷದ ವೃದ್ಧ ಹೃದಯಾಘಾತದಿಂದ ಸತ್ತಿದ್ದಾರೆ ಎಂದು ವರದಿಯಾಗಿದೆ.