ಸಬ್ ರಿಜಿಸ್ಟ್ರಾರ್ ಕಚೇರಿ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೆ ಓಪನ್

sub
Published on

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳು ಶನಿವಾರ(ಸೆ.23) ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೂ ಕಾರ್ಯ ನಿರ್ವಹಿಸಲಿವೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸಲಹೆ ನೀಡಿದೆ.

ಅ.1 ರಿಂದ ಸ್ಥಿರಾಸ್ತಿ ಹೊಸ ಮಾರ್ಗಸೂಚಿ ದರ ಜಾರಿ ಆಗಲಿದೆ ಎಂದು ಜನರು ಸೈಟು, ಕಟ್ಟಡ, ಭೂಮಿ ಸೇರಿದಂತೆ ಆಸ್ತಿಗಳ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಸಬ್ ರಿಜಿಸ್ಟ್ರಾರ್ ಕಚೇರಿಗಳತ್ತ ಮುಗಿ ಬೀಳುತ್ತಿದ್ದಾರೆ.

ಮತ್ತೊಂದೆಡೆ ಕಾವೇರಿ 2.0 ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಯಿಂದ ಸೇವೆಯಲ್ಲಿ ವಿಳಂಬ ಆಗುತ್ತಿದೆ. ಜನರು ಪರದಾಡುತ್ತಿದ್ದು, ಅಧಿಕಾರಿ, ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗುತ್ತಿದೆ.

ಇದಕ್ಕಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಸಮಯ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೂ ಅಧಿಕಾರಿ, ಸಿಬ್ಬಂದಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. 4ನೇ ಶನಿವಾರ(ಸೆ.23) ಆದರೂ ಕಚೇರಿ ತೆರೆದಿರುತ್ತದೆ. ಈ ಆದೇಶ ಸೆ.30ರವರೆಗೆ ಮಾತ್ರ ಜಾರಿಯಲ್ಲಿ ಇರಲಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net