ಕೇಂದ್ರ ರಸಗೊಬ್ಬರ ಕಳುಹಿಸಿದರಷ್ಟೇ ಪರಿಹಾರ

Fertilizer
Published on

ಬೆಂಗಳೂರು: ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಬಿಟ್ಟು ರಾಜ್ಯಕ್ಕೆ ಬಾಕಿ ಇರುವ ರಸಗೊಬ್ಬರ ಸರಬರಾಜು ಮಾಡಿದರಷ್ಟೇ ರೈತರ ಸಮಸ್ಯೆ ಬಗೆಹರಿಯಲಿದೆ. ಇಲ್ಲವಾದರೆ, ಸಾಧ್ಯವೇ ಇಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಹೇಳಿದರು.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಳೆದೆರಡು ವರ್ಷಗಳಿಂದ ಮುಂಗಾರು ಹಂಗಾಮಿನಲ್ಲಿ ಯಾವುದೇ ಸಮಸ್ಯೆ ಆಗದಂತೆ ರಸಗೊಬ್ಬರ ಪೂರೈಕೆ ಮಾಡಲಾಗಿದೆ. ಈಗ ಸಮಸ್ಯೆಯಾಗುತ್ತಿದೆ ಎಂದರೆ ಅದಕ್ಕೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ ಎಂದರು. ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೇಂದ್ರ ಸಚಿವರೊಂದಿಗೆ ಮಾತನಾಡಿ ರಸಗೊಬ್ಬರ ತರಿಸುವ ಬದಲು ಕೊರತೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜ್ಯದ ಬೇಡಿಕೆಯಂತೆ ಕೇಂದ್ರ ಸರ್ಕಾರ ನಿಗದಿತ ಪ್ರಮಾಣದಲ್ಲಿ ಯೂರಿಯಾ ಪೂರೈಕೆ ಮಾಡಿಲ್ಲ ಎಂದು ಆರೋಪಿಸಿದರು.

ರಸಗೊಬ್ಬರ ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಆಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಚಲುವರಾಯಸ್ವಾಮಿ, ಪ್ರತಿಪಕ್ಷದವರಿಗೆ ಬುದ್ಧಿ ಇಲ್ಲ. ೇರೆ ದೇಶಕ್ಕೆ ರಸಗೊಬ್ಬರ ಸಾಗಾಟ ಆಗುತ್ತಿದ್ದರೇ ಅದನ್ನು ತಡೆಯುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಇದನ್ನು ಬಿಟ್ಟು, ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಯೂರಿಯಾ ಕೊರತೆ ಕಂಡು ಬಂದಿರುವ ಕಡೆ ಅಧಿಕಾರಿಗಳು ಅಲರ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಅವರೊಂದಿಗೆ ಸಿಎಂ ಮತ್ತು ನಾನು ನಿರಂತರವಾಗಿ ಸಂಪರ್ಕ ಮಾಡಿ ಸಮಸ್ಯೆ ಪರಿಹರಿಸುವಂತೆ ಮಾಡುತ್ತಿದ್ದೇವೆ.

ಎನ್. ಚಲುವರಾಯಸ್ವಾಮಿ, ಕೃಷಿ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net