ನಿಷ್ಪಕ್ಷಪಾತವಾಗಿ ಕೆಲಸ ಮಾಡಿದಾಗ ಸಮಸ್ಯೆ ಈಡೇರಲಿದೆ

RemasterDirector_1a5c03258
ಪಿರಿಯಾಪಟ್ಟಣ ತಾಲೂಕು ಕೊತ್ತವಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ಸಚಿವ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು.
Published on

ರಾವಂದೂರು: ಗ್ರಾಮೀಣ ಜನರ ಆಶೋತ್ತರಗಳಿಗೆ ಜನಪ್ರತಿನಿಧಿಗಳು ಸ್ಪಂದಿಸಿ ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ಜನರ ಸಮಸ್ಯೆಗಳನ್ನು ಈಡೇರಿಸಿದಂತಾಗುತ್ತದೆ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕು ಕೊತ್ತವಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಜನರು ಗ್ರಾಮಗಳ ಅಭಿವೃದ್ಧಿ ಆಗಬೇಕಾದರೆ ತಮ್ಮ ವೈಯಕ್ತಿಕ ಇಚ್ಛಾಶಕ್ತಿಯನ್ನು ಬದಿಗೊತ್ತಿ ಜಾತ್ಯತೀತ ಮನೋಭಾವದಿಂದ ಕೆಲಸ ಮಾಡಿದಾಗ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಕಾಂಗ್ರೆಸ್ ಸರ್ಕಾರದಲ್ಲಿ ಜನಪರ ಯೋಜನೆಗಳಿಗೆ ಹಣ ಉಪಯೋಗಿಸಿದ್ದರಿಂದ ಹಣವಿಲ್ಲ ಎಂದು ಹೇಳಿಕೊಂಡು ತಿರುಗುತ್ತಿರುವ ವಿರೋಧಿಗಳಿಗೆ ಈ ಅಭಿವೃದ್ಧಿ ಕೆಲಸಗಳನ್ನು ನೋಡಿದರೆ ಅವರಿಗೆ ಉತ್ತರ ಸಿಕ್ಕಂತಾಗುತ್ತದೆ ಎಂದು ತಿಳಿಸಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆ.ಹೊಲದಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸರಸ್ವತಿ, ಗ್ರಾಪಂ ಅಧ್ಯಕ್ಷ ರಾಜೇಗೌಡ, ಉಪಾಧ್ಯಕ್ಷೆ ಪ್ರೀತಿ ಮಲ್ಲಿಕಾರ್ಜುನ್, ಕಿತ್ತೂರು ಪಿಸಿಸಿಎಸ್‌ನ ಅಧ್ಯಕ್ಷ ಸುಮಿತ್ ಈರಾಜ್ ಕೀರ್ತಿ, ಬಾಳೆ ಮಂಡಿ ಗಂಗಾಧರ್, ಡಾ.ಶಂಕರ್, ತಹಸೀಲ್ದಾರ್ ನಿಸರ್ಗಾ ಪ್ರಿಯಾ, ತಾಪಂ ಇಒ ಸುನಿಲ್, ಪಿಡಿಒ ಮನು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net