ಕಂಪ್ಯೂಟರ್ ಸೈನ್ಸ್ ಸೇರಿ 4 ವಿಷಯಗಳ ಎನ್‌ಸಿಇಆರ್‌ಟಿ ಪಠ್ಯ ಅಳವಡಿಕೆಗೆ ಮುಂದಾದ ಪಿಯು ಇಲಾಖೆ

textbook
Published on

ಬೆಂಗಳೂರು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ (ಎನ್‌ಸಿಇಆರ್‌ಟಿ) ಪಠ್ಯಪುಸ್ತಕಗಳನ್ನು 2024-25ನೇ ಸಾಲಿನಿಂದ ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಪದವಿ ಪೂರ್ವ) ತಿಳಿಸಿದೆ.

ಗಣಕ ವಿಜ್ಞಾನ, ಗೃಹ ವಿಜ್ಞಾನ ಮತ್ತು ಮನಃಶಾಸ ವಿಷಯಗಳ ಪಠ್ಯಪುಸ್ತಕಗಳನ್ನು 2024- 25ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ಮತ್ತು 2025-26ನೇ ಸಾಲಿನಿಂದ ದ್ವಿತೀಯ ಪಿಯುಸಿ ತರಗತಿಗಳಿಗೆ ಅಳವಡಿಸಿಕೊಳ್ಳಲಾಗುತ್ತದೆ ಎಂದು ಇಲಾಖೆ ನಿರ್ದೇಶಕಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಜೆಇಇ ಮತ್ತು ಸಿಇಟಿ ಸೇರಿ ಇತರೆ ಪರೀಕ್ಷೆಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 2013ರಿಂದಲೇ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಹಂತಹಂತವಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ವಿಜ್ಞಾನ ವಿಷಯಗಳಿಗೆ ಒತ್ತು ನೀಡಲಾಗಿತ್ತು. ಇದೀಗ, ವಾಣಿಜ್ಯ, ಕಲಾವಿಭಾಗದ ವಿಷಯಗಳನ್ನು ಕೂಡ ಅಳವಡಿಸಿಕೊಳ್ಳಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net