ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾದ ವ್ಯಕ್ತಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

gulbarga feb 25 2020
Published on

ಕಲಬುರಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಪಟ್ಟಣದ ಗೋವಾ ಹೋಟೆಲ್​ ಬಳಿ ಪ್ರವೀಣ (30) ಎಂಬಾತನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪ್ರವೀಣ ಚಿಂಚೋಳಿ ತಾಲೂಕಿನ ಮಿರಿಯಾಣಾ ಗ್ರಾಮದವನು. ಗೋವಾ ಹೋಟೆಲ್​ ಬಳಿ 4 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ಯಲು ಯತ್ನಿಸಿದ ವೇಳೆ ಸಾರ್ವಜನಿಕರು ಧಾವಿಸಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.

ಬ್ರಹ್ಮಪೂರ ಪೊಲೀಸರು ಸ್ಥಳಕ್ಕೆ ತೆರಳಿ ಪ್ರವೀಣನನ್ನು ವಶಕ್ಕೆ ಪಡೆದಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net