

ಬೆಂಗಳೂರು: ಈ ಶತಮಾನದ ನಿಜವಾದ ಕಟ್ಟಪ್ಪ ಎಂದರೆ ಅದು ನಿಮ್ಮ ತಂದೆ(ಮಲ್ಲಿಕಾರ್ಜುನ್ ಖರ್ಗೆ) ಎಂದು ಪ್ರಿಯಾಂಕ್ ಖರ್ಗೆ(Kharge) ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಒಳ್ಳೆಯ ಅವಕಾಶ ಇದ್ದರೂ ಅ ಕಾಮಿಡಿ ಪೀಸ್ನ ರಕ್ಷಣೆ ಮಾಡುತ್ತಿದ್ದಾರೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಅಶೋಕ ಹಂಚಿಕೊಂಡಿದ್ದಾರೆ.
ಭಾರತೀಯತೆಯೂ ಇಲ್ಲದ, ರಾಷ್ಟ್ರೀಯತೆಯೂ ಇಲ್ಲದ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಕಳೆದ ಹತ್ತು ವರ್ಷಗಳಿಂದ ಈ ದೇಶದ ಅತೀ ದೊಡ್ಡ ಕಾಮಿಡಿ ಸಿನಿಮಾ ಆಗಿದೆ. ಈ ಸೂಪರ್ ಹಿಟ್ ಕಾಮಿಡಿ ಸಿನಿಮಾದ ಸ್ಟಾರ್ ಕಾಮಿಡಿಯನ್ ಯಾರು ಎಂದು ನಾನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲನ ಎಂದು ಮಲ್ಲಿಕಾರ್ಜುನ ಖರ್ಗೆ ಹೆಸರಿಸದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಪಾಪ ನಿಮ್ಮ ತಂದೆಯವರು ಈ ಇಳಿ ವಯಸ್ಸಿನಲ್ಲೂ ಆ ಕಾಮಿಡಿ ಪೀಸ್ನ ಮಾನ ಉಳಿಸಲು ರಾಜ್ಯದಲ್ಲಿ ಸಿಗಬಹುದಾದ ಅಧಿಕಾರವನ್ನು ತ್ಯಾಗ ಮಾಡಿ ಅಲ್ಲಿ ಆ ಕಾಮಿಡಿ ಪೀಸ್ಗೆ ರಕ್ಷಣೆ ಕೊಡುತ್ತಿದ್ದಾರಲ್ಲ, ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆಯವರೇ ಎಂದು ಪ್ರಿಯಾಂಕ್ ಖರ್ಗೆ ವಿರುದ್ದ ವ್ಯಂಗ್ಯವಾಡಿದ್ದಾರೆ.
ಅಂದಹಾಗೆ ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ 35 ಶಾಸಕರು ಸಭೆ ಸೇರಿದ್ದರಂತಲ್ಲ, ಅಲ್ಲಿ ತಾವು ಇದ್ದರೋ? ಅಥವಾ ಆತ್ಮಹತ್ಯೆಗೆ ಕಾರಣವಾದರೂ ಸರಿ, ಕೊಲೆ ಮಾಡಿದರೂ ಸರಿ, ಎಐಸಿಸಿ ಅಧ್ಯಕ್ಷರ ಕೋಟಾದಲ್ಲಿ ತಮ್ಮ ಕುರ್ಚಿ ಮಾತ್ರ ಸುಭದ್ರ ಎಂದು ಯಾವ ಬಣಕ್ಕೂ ಸೇರದೆ ತಟಸ್ಥರಾಗಿರುವ ನಿರ್ಧಾರ ಮಾಡಿದ್ದೀರೋ? ಎಂದು ಅಶೋಕ ಕಿಡಿ ಕಾಡಿದ್ದಾರೆ.