ನಿಯಂತ್ರಣ ತಪ್ಪಿ ಬಿದ್ದ ಸವಾರ ಸಾವು

accident raichur
Published on

ಬೆಂಗಳೂರು: ರಸ್ತೆ ಹಂಪ್ಸ್‌ನಲ್ಲಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಸಂಜಿತ್ ಆಡ್ಯಾ(೪೭) ಮೃತ ಸವಾರ. ಸೋಮವಾರ ಮುಂಜಾನೆ ೨.೨೦ಕ್ಕೆ ರಾಮಗೊಂಡನಹಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಮೃತ ಸವಾರ ಸಂಜಿತ್ ನಗರದ ತೂಬರಹಳ್ಳಿಯಲ್ಲಿ ನೆಲೆಸಿದ್ದರು. ಪ್ಲಿಪ್ ಕಾರ್ಟ್ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ ಸಂಜಿತ್, ಭಾನುವಾರ ಮುಂಜಾನೆ ದ್ವಿಚಕ್ರ ವಾಹನದಲ್ಲಿ ರಾಮಗೊಂಡನಹಳ್ಳಿ ರಸ್ತೆಯಲ್ಲಿ ತೆರಳುವಾಗ, ರಸ್ತೆ ಹಂಪ್ಸ್ ಎದುರಾಗಿದೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸಾರ್ವಜನಿಕರು ಸಂಜಿತ್‌ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾರೆ. ಸವಾರ ಸಂಜಿತ್ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿದ ಪರಿಣಾಮ ಹಂಪ್ಸ್‌ನಲ್ಲಿ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟಿರುವ ಸಾಧ್ಯತೆಯಿದೆ. ಈ ಸಂಬಂಧ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net