ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮಹತ್ತರ

priyadarshini
ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವವನ್ನು ಡಾ. ಧನಂಜಯ ಸರ್ಜಿ ಉದ್ಘಾಟಿಸಿದರು. ಎನ್.ರಮೇಶ್, ಸುನೀತಾದೇವಿ, ಡಾ. ಸಿ.ಪರಮೇಶ್ವರ್, ಮೋನಿಕಾ ರಮೇಶ್, ನಾರಾಯಣ್ ಇತರರಿದ್ದರು.
Published on

ಶಿವಮೊಗ್ಗ: ದೇಶದ ಅಭಿವೃದ್ಧಿಗೆ ಶಿಕ್ಷಣವೇ ಮಾರ್ಗ. ಹೆಚ್ಚು ಸುಶಿಕ್ಷಿತರು ಇರುವ ದೇಶ ಆರ್ಥಿಕವಾಗಿಯೂ ಬಲಾಢ್ಯ ಆಗಿರುತ್ತದೆ ಎಂದು ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ಪ್ರಾಚಾರ್ಯೆ ಸುನೀತಾದೇವಿ ಅಭಿಪ್ರಾಯಪಟ್ಟರು.

ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯ ನಾಲ್ಕು ಆಯಾಮಗಳು. ಆಡಳಿತ ಮಂಡಳಿ ಶೈಕ್ಷಣಿಕ ವ್ಯವಸ್ಥೆಗೆ ಬೇಕಿರುವ ಮೂಲ ಸೌಕರ್ಯಗಳನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಶಿಕ್ಷಕರು ಮಕ್ಕಳಲ್ಲಿ ಅರಿವು ಮೂಡಿಸುತ್ತಾರೆ. ಪಾಲಕರು ಮಕ್ಕಳಿಗೆ ಸಾಮಾನ್ಯ ಸಂಗತಿಗಳನ್ನು ತಿಳಿಸಿ ಆತ್ಮವಿಶ್ವಾಸ ಮೂಡಿಸಿ ಭಾವನಾತ್ಮಕ ಬೆಂಬಲ ನೀಡುತ್ತಾರೆ. ಶಾಲೆಯೊಂದರಿಂದಲೇ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಿಯದರ್ಶಿನಿ ಸಂಸ್ಥೆ ಕಾರ್ಯದರ್ಶಿ ಎನ್.ರಮೇಶ್, ಆಡಳಿತ ಮಂಡಳಿ ಸದಸ್ಯರಾದ ಮೋನಿಕಾ ರಮೇಶ್, ರಾಧಿಕಾ ದೇವಿ, ಡಾ. ಸಿ.ಪರಮೇಶ್ವರ್, ನಾರಾಯಣ್, ಪ್ರಿಯದರ್ಶಿನಿ ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ವೀರೇಶ್, ಆರ್ಯ ಸೈನ್ಸ್ ಪಿಯು ಕಾಲೇಜಿನ ಪ್ರಾಚಾರ್ಯ ನವೀನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net