ಹತ್ತನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಪ್ರತಿಭಟನೆ

21-OCT-GPT-3
ಗುಂಡ್ಲುಪೇಟೆ ತಾಲೂಕು ಕಚೇರಿ ಎದುರು ರೈತರು ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಬ್ಬದ ದಿನವೂ ಪ್ರತಿಭಟನೆ ನಡೆಸುತ್ತಿದ್ದಾರೆ.
Published on

ಗುಂಡ್ಲುಪೇಟೆ: ಕೆರೆಗಳಿಗೆ ನದಿ ಮೂಲದಿಂದ ನೀರು ತುಂಬಿಸುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಟ್ಟಣದ ತಾಲೂಕು ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಹತ್ತನೇ ದಿನಕ್ಕೆ ಕಾಲಿಟ್ಟಿದೆ.

ತಾಲೂಕಿನ ಕೆರೆಗಳಿಗೆ ನದಿ ಮೂಲದಿಂದ ನೀರು ತುಂಬಿಸುವುದು, ಹಲವಾರು ವ?ರ್ಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ನೀಡಲು ಅರಣ್ಯ ಇಲಾಖೆಯಿಂದ ಎನ್.ಓ.ಸಿ. ನೀಡುವುದು, ಸಾಗುವಳಿ ನೀಡಿರುವ ರೈತರಿಗೆ ಪಹಣಿ ನೀಡಿ, ಹದ್ದುಬಸ್ತು ದುರಸ್ಥಿ ಮಾಡುವುದು ಎಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಹಂಗಳ ದಿಲೀಪ್ ನೇತೃತ್ವದಲ್ಲಿ ತಾಲೂಕು ಕಛೇರಿ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು ದೀಪಾವಳಿ ಹಬ್ಬದ ದಿನವೂ ಪ್ರತಿಭಟನೆ ನಡೆಸುವ ಮೂಲಕ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net