ದೇಗುಲಗಳ ಬದಲಾಗಿ ಶಾಲೆ ಕಟ್ಟಿದ ಚೇತನ: ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕಾರ್ಯ ಸ್ಮರಿಸಿದ ಡಾ. ಸಿಎನ್‌ಎ

18-01-bidadi-1
Published on

 ಬಿಡದಿ: ಬಾಲಗಂಗಾಧರನಾಥ ಸ್ವಾಮೀಜಿ ಅವರು ಜಗತ್ತಿಗೆ ಜ್ಞಾನ ಮತ್ತು ಸೇವಾ ಕಾರ್ಯಗಳನ್ನು ಮಾಡುವ ಎರಡು ಕೊಡುಗೆಗಳನ್ನು ಸಮಾಜಕ್ಕೆ ನೀಡಿದ್ದಾರೆ. ಅವರು ಆರಂಭದಲ್ಲಿ ಎಲ್ಲೂ ದೇವಾಲಯಗಳನ್ನು ಕಟ್ಟಲಿಲ್ಲ. ಬದಲಾಗಿ ಜ್ಞಾನ ಪ್ರಸಾರದಿಂದ ಸಮಾಜದ ಉನ್ನತಿ ಸಾಧ್ಯ ಎಂದು ಅರಿತಿದ್ದ ಶ್ರೀಗಳು ಶಿಕ್ಷಣ ಕ್ಷೇತ್ರವನ್ನು ಆರಿಸಿಕೊಂಡರು ಎಂದು ಬಣ್ಣಿಸಿದರು.

 ಸಂಸದ ಡಿ.ಕೆ. ಸುರೇಶ್ ಅವರನ್ನು ಅಭಿನಂದಿಸಲಾಯಿತು. 

ಬಿಜಿಎಸ್ ಸೇವಾ ಸಮಿತಿ ವತಿಯಿಂದ ಪಟ್ಟಣದ ಬಿಜಿಎಸ್ ವೃತ್ತದಲ್ಲಿ ಬುಧವಾರ ಆಯೋಜಿಸಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ 78ನೇ ಜಯಂತ್ಯುತ್ಸವದಲ್ಲಿ ಮಾತನಾಡಿ, ಗ್ರಾಮೀಣ ಜನತೆ ಉದ್ಧಾರವಾಗಬೇಕಾದರೆ ಮೊದಲು ಆ ಪ್ರದೇಶದ ಬಡಮಕ್ಕಳು ವಿದ್ಯಾವಂತರಾಗಬೇಕು ಎಂಬ ದೃಷ್ಟಿಯಿಂದ ಹಳ್ಳಿಹಳ್ಳಿಗಳಲ್ಲೂ ವಿದ್ಯಾಸಂಸ್ಥೆಗಳನ್ನು ತೆರೆದರು. ನಾಡಿನಾದ್ಯಂತ ಶಾಲಾ ಕಾಲೇಜು, ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದ ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ ಎಂದು ಶ್ರೀಗಳ ಗುಣಗಾನ ವಾಡಿದರು.

ಸಂಸದ ಡಿ.ಕೆ.ಸುರೇಶ್ ವಾತನಾಡಿ, ಬಡಜನರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದ ಶ್ರೀಗಳು ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳನ್ನು ತೆರೆದರು. ಅಂಧ ಮಕ್ಕಳ ವಸತಿ ಶಾಲೆ, ಅನಾಥಾಲಯ, ವೃದ್ಧಾಶ್ರಮ, ಮಹಿಳಾ ಸೇವಾಶ್ರಮಗಳನ್ನು ಸ್ಥಾಪಿಸಿದ್ದಾರೆ. ಇಂತಹ ಮಹಾನ್ ಚೇತನವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ, ಸಂಸದ ಡಿ.ಕೆ.ಸುರೇಶ್, ಶಾಸಕ ಎ.ಮಂಜುನಾಥ್, ವಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಸಿ.ಎಂ.ಲಿಂಗಪ್ಪ, ಎಸ್.ರವಿ ಮತ್ತಿತರರು ಶ್ರೀಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

ಶ್ರೀಗಳ ಜಯಂತ್ಯುತ್ಸವದ ಅಂಗವಾಗಿ ಬಿಜಿಎಸ್ ಸೇವಾ ಸಮಿತಿ ವತಿಯಿಂದ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.

ಬಿಜಿಎಸ್ ಸೇವಾ ಸಮಿತಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಸಿ.ಉಮೇಶ್, ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಖಜಾಂಚಿ ನರಸಿಂಹಯ್ಯ, ನಿರ್ದೇಶಕರಾದ ಶಿವಲಿಂಗಯ್ಯ, ಶಶಿಕುವಾರ್, ಬಿಜೆಪಿ ಮುಖಂಡ ಕೆ.ಆರ್. ಪ್ರಸಾದ್ ಗೌಡ, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ದೀಪಾ ಮುನಿರಾಜು, ಪುರಸಭೆ ಸದಸ್ಯರಾದ ಕೆ.ಕುವಾರ್, ನವೀನ್, ಶ್ರೀನಿವಾಸ್ ಮುಖಂಡರಾದ ಬೆಟ್ಟಸ್ವಾಮಿ, ಅಬ್ಬನಕುಪ್ಪೆ ರಮೇಶ್ ಕುವಾರ್, ಭರತ್ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net