ಉದ್ಯಮಿ ಮುಖೇಶ್​ ಅಂಬಾನಿ ಕುಟುಂಬಕ್ಕೆ ಭದ್ರತೆ ಮುಂದುವರಿಸಲು ಸುಪ್ರೀಂಕೋರ್ಟ್​ ಸೂಚನೆ

Supreme-Mukesh
Published on

ನವದೆಹಲಿ: ಉದ್ಯಮಿ ಮುಖೇಶ್​ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಮುಂದುವರಿಸಲು ಸುಪ್ರೀಂಕೋರ್ಟ್​ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ಅವರಿದ್ದ ನ್ಯಾಯಮೂರ್ತಿಗಳಾದಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ, ಭದ್ರತೆ ಮುಂದುವರೆಸಲು ಅನುಮತಿಸಿದೆ.

ತ್ರಿಪುರಾ ಹೈಕೋರ್ಟ್​ ನಿರ್ದೇಶನವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ಭದ್ರತೆ ಮುಂದುವರಿಸಲು ಸೂಚಿಸಿದೆ.

ಮುಂಬೈನಲ್ಲಿರುವ ಉದ್ಯಮಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ತ್ರಿಪುರಾ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಜೂನ್ 29 ರಂದು ತಡೆ ನೀಡಿತ್ತು.

ಬಿಕಾಶ್​ ಸಾಹಾ ಎಂಬುವವರು ಮುಕೇಶ್​ ಅಂಬಾನಿಗೆ ನೀಡಲಾಗಿರುವ ಭದ್ರತೆಯನ್ನು ಪ್ರಶ್ನಿಸಿ ಕೋರ್ಟ್​​ ಮೆಟ್ಟಿಲೇರಿದ್ದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net