

ಗುಂಡ್ಲುಪೇಟೆ : ತಾಲೂಕಿನ ಅರೇಪುರ ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಲೀಮ್, ಅಲಿನಾ, ರೈಯಾನಾ, ಹೈರಾ ಮತ್ತು ಬಿಲಾಲ್ ಗಾಯಗೊಂಡವರು. ಇವರು ಕಾರಿನಲ್ಲಿ ರಾಮನಗರದಿಂದ ಊಟಿಯತ್ತ ತೆರಳುತ್ತಿದ್ದರು. ಈ ವೇಳೆ ಅರೇಪುರ ಗೇಟ್ ಸಮೀಪ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿಬಿದ್ದ ಪರಿಣಾಮ ಸಣ್ಣಪುಟ್ಟ ಗಾಯಗಳಾಗಿದೆ. ಕೂಡಲೇ ಹೊಯ್ಸಳ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಗ್ರಾಮದ ಸಮುದಾಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.