ತಾಪಂ ಕಟ್ಟಡ ಎಲ್ಲರ ಪರಿಶ್ರಮದ ಫಲ: ಸಚಿವ ಮಧು

taluk panchayat
ಶಿವಮೊಗ್ಗ ತಾಪಂನ ನೂತನ ಕಟ್ಟಡವನ್ನು ಮಧು ಬಂಗಾರಪ್ಪ ಉದ್ಘಾಟಿಸಿದರು. ಶಾರದಾ ಪೂರ‌್ಯಾನಾಯ್ಕಾ, ಎನ್.ಹೇಮಂತ್, ಸಿ.ಎಸ್.ಚಂದ್ರಭೂಪಾಲ, ತಾರಾ, ವಿಜಯಕುಮಾರ್, ಚೇತನ್ ಮುಂತಾದವರಿದ್ದರು.
Published on

ಶಿವಮೊಗ್ಗ: ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ನೂತನ ತಾಲೂಕು ಪಂಚಾಯಿತಿ ಕಟ್ಟಡ ತಲೆಎತ್ತಿ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶನಿವಾರ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕಟ್ಟಡವನ್ನು ಬಹಳ ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ. ಬಾಕಿ ಉಳಿದಿರುವ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಿ ಪೂರ್ಣಗೊಳಿಸಲಾಗುವುದು ಎಂದರು.

ಕಾರ್ಯಪಾಲಕ ಅಭಿಯಂತ ಬಿ.ಎನ್. ಮಂಜುನಾಥ್ ಮಾತನಾಡಿ, ತಾಪಂ ನೂತನ ಕಟ್ಟಡವು 1.72 ಕೋಟಿ ರೂ. ಅನುದಾನದಲ್ಲಿ ಪೂರ್ಣಗೊಂಡಿದೆ. ಕೆಲವು ಕಾಮಗಾರಿಗಳು ಬಾಕಿ ಇದೆ. ಇದಕ್ಕೆ ಪೂರಕವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಬೇಕೆಂದರು.

ಶಾಸಕಿ ಶಾರದಾ ಪೂರ‌್ಯಾನಾಯ್ಕಾ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಎಚ್.ಎಂ.ಮಧು, ಜಿಪಂ ಸಿಇಒ ಎನ್.ಹೇಮಂತ್, ತಾಪಂ ಇಒ ತಾರಾ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net